ಮುಳ್ಳೂರು, ಜ. ೧: ರಾಷ್ಟಿçÃಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತ ವಿಚಾರ ಮತ್ತು ಅನುಭವಗಳನ್ನು ತಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎಸ್. ಪರಮೇಶ್ ಅಭಿಪ್ರಾಯಪಟ್ಟರು.
ಅವರು ಸಮೀಪದ ಬ್ಯಾಡಗೊಟ್ಟ ಗ್ರಾ.ಪಂ. ವ್ಯಾಪ್ತಿಯ ಊರುಗುತ್ತಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಂಡಿರುವ ೨೦೨೨-೨೩ನೇ ಸಾಲಿನ ಎನ್.ಎಸ್.ಎಸ್. ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಎಂ.ಆರ್. ನಿರಂಜನ್ ಮಾತನಾಡಿ, ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಸಾಮಾಜಿಕ ಕಳಕಳಿ, ನಾಯಕತ್ವದ ಗುಣ, ಮಾನವೀಯ ಮೌಲ್ಯ, ಸಮಾನತೆ, ಏಕತೆ, ನಾಗರಿಕ ಜವಾಬ್ದಾರಿ ಇನ್ನು ಮುಂತಾದ ವಿಚಾರಗಳನ್ನು ಅರಿತು ಅಳವಡಿಸಿಕೊಳ್ಳಲು ರಾಷ್ಟಿçÃಯ ಸೇವಾ ಯೋಜನೆ ಅತ್ಯುತ್ತಮ ವೇದಿಕೆಯಾಗಿದೆ ಎಂದರು.
ಊರುಗುತ್ತಿ ಶಾಲಾ ಮುಖ್ಯ ಶಿಕ್ಷಕಿ ಎ.ಪಿ. ರಾಧ ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳು ಗ್ರಾಮದ ಶಾಲೆಗಳಲ್ಲಿ ಶಿಬಿರಗಳನ್ನು ನಡೆಸುವುದರಿಂದ ಗ್ರಾಮ ಮತ್ತು ಶಾಲೆಗಳು ಅಭಿವೃದ್ಧಿಯಾಗುತ್ತದೆ ಹಾಗೂ ಗ್ರಾಮಸ್ಥರಿಗೂ ಸಹ ಹಲವು ವಿಚಾರಗಳ ಬಗ್ಗೆ ಅರಿವು ಹೊಂದಲು ಸಾಧ್ಯವಾಗುತ್ತದೆ ಎಂದರು.
ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಕೆ.ಹೆಚ್. ಯೋಗೇಂದ್ರ ಶಿಬಿರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಸಿ.ವಿ. ಶಂಭುಲಿAಗಪ್ಪ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಬ್ಯಾಡಗೊಟ್ಟ ಗ್ರಾ.ಪಂ. ಸದಸ್ಯ ಮೋಕ್ಷಿತ್ರಾಜ್, ಸದಸ್ಯೆ ದಾಕ್ಷಾಯಿಣಿ ಕಾಂತರಾಜ್, ಮಾಜಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಗಣೇಶ್, ಕೊಡ್ಲಿಪೇಟೆ ಕ್ಲಸ್ಟರ್ ಸಿಆರ್ಪಿ ರವೀಶ್, ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ವಿಶಾಲಾಕ್ಷಿ, ಕಾಲೇಜು ಉಪನ್ಯಾಸಕರು, ಶಿಕ್ಷಕರು, ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.