ಮಡಿಕೇರಿ, ಜ. ೧: ಪ್ರಸಕ್ತ ಸಾಲಿನ ಕೊಡಗು ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ತಾ. ೩ ಮತ್ತು ೪ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಸೇವಾ ಮತ್ತು ಕ್ರೀಡಾ ಇಲಾಖೆ, ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ.

ಆಸಕ್ತ ಸರ್ಕಾರಿ ನೌಕರ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೯೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟದ ನೋಂದಣಿ hಣಣಠಿs://ಜಿoಡಿms.gಟe/uಖಿಟಿಆzqUsಖಿ೧ಊeಜPoಡಿ೭ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.