ವೀರಾಜಪೇಟೆ, ಜ. ೧: ಪಟ್ಟಣದ ಮಲೆತಿರಿಕೆ ಬೆಟ್ಟದಲ್ಲಿನ ಅಯ್ಯಪ್ಪ ದೇವಾಲಯದ ವಾರ್ಷಿಕ ಉತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಅಯ್ಯಪ್ಪ ವ್ರತಧಾರಿಗಳಿಂದ ಪುಷ್ಪಾರ್ಚನೆ, ಲಕ್ಷಾರ್ಚನೆ, ಭಜನೆ ನಡೆಯಿತು. ಮಹಾಪೂಜೆಯ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.