ಕೂಡಿಗೆ, ಜ. ೨: ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಮೀಪದ ತೊರೆನೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆಯ ಮಕ್ಕಳ ಕಲಿಕೆಯ ಬಗ್ಗೆ ಮತ್ತು ಶಾಲೆಯ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದರು. ಗೈರು ಹಾಜರಾ ಗುವ ಮಕ್ಕಳನ್ನು ಪೋಷಕರೊಂದಿಗೆ ಮಾತನಾಡಿ, ಶಾಲೆಗೆ ಕರೆತರುವಂತೆ ಶಿಕ್ಷಕರಿಗೆ ಸೂಚನೆ ನೀಡಿದರು. ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡುವ ಭರವಸೆ ನೀಡಿದರು.

ಈ ಸಂದರ್ಭ ಸಾರ್ವಜನಿಕ ಶಿಕ್ಷಣ ಅಧಿಕಾರಿ ಸಿ. ರಂಗದಾಮಯ್ಯ, ತಾಲೂಕು ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಸಹಕಾರ ಸಂಘದ ನಿರ್ದೇಶಕ ಟಿ.ಕೆ. ಪಾಂಡುರAಗ, ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ರವಿಚಂದ್ರ, ಪ್ರೌಢಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಣ್ಣಯ್ಯ, ಶಾಲಾ ಮುಖ್ಯೋಪಾಧ್ಯಾಯಿನಿ ಕಾಮಾಕ್ಷಿ ಸೇರಿದಂತೆ ಸಹ ಶಿಕ್ಷಕರು, ಗ್ರಾಮಸ್ಥರು ಹಾಜರಿದ್ದರು.