ಮಡಿಕೇರಿ, ಜ. ೨: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟಿçÃಯ ಸೇವಾ ಯೋಜನೆ, ವೀರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜು ಇವರ ಆಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರವು ಚೆನ್ನಂಗಿ-ಬಸವನಹಳ್ಳಿ (ದಿಡ್ಡಳ್ಳಿ) ಸರ್ಕಾರಿ ಗಿರಿಜನ ಆಶ್ರಮ ಶಾಲೆಯಲ್ಲಿ ತಾ. ೩ ರಿಂದ (ಇಂದಿನಿAದ) ತಾ. ೯ ರವರೆಗೆ ನಡೆಯಲಿದೆ.
ತಾ. ೩ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಯೋಜನಾ ಸಮಾನ್ವಯಾಧಿಕಾರಿ ಎಸ್. ಹೊನ್ನೇಗೌಡ, ಚೆನ್ನಯ್ಯನಕೋಟೆ ಗ್ರಾ.ಪಂ.ಸದಸ್ಯರು, ಬುಡಕಟ್ಟು ಜನಾಂಗದ ಮುಖಂಡರಾದ ಜಿ.ಕೆ. ಅಪ್ಪಾಜಿ, ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎಂ. ಜಡೇಗೌಡ, ಸೈಂಟ್ ಆನ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ರೆ.ಫಾ. ಐಸಾಕ್ ರತ್ನಾಕರ್, ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಸರ್ಕಾರಿ ಗಿರಿಜನ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯರಾದ ಸಿದ್ಧಲಿಂಗ ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.