ವೀರಾಜಪೇಟೆ, ಜ. ೩: ವೀರಾಜಪೇಟೆ ಸಮೀಪದ ವಿ. ಬಾಡಗ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನದ ೧೦ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ದೇವಾಲಯ ದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಆಚರಿಸಲಾಯಿತು.

ಶುಕ್ರವಾರ ಬೆಳಿಗ್ಗೆ ೬ ಗಂಟೆಗೆ ಅಭಿಷೇಕ ಮತ್ತು ಅಲಂಕಾರ ಪೂಜೆ, ೮ ಗಂಟೆಗೆ ಭಂಡಾರ ತರುವುದು, ೯.೩೦ ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ ೧೨ ಗಂಟೆಗೆ ಮಹಾಪೂಜೆ ಹಾಗೂ ಅಲಂಕಾರ ಪೂಜೆ, ರಾತ್ರಿ ೮ ಗಂಟೆಗೆ ರಂಗಪೂಜೆಯನ್ನು ಸಲ್ಲಿಸಲಾಯಿತು. ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ದೇವಾಲಯದ ವತಿಯಿಂದ ಏರ್ಪಡಿಸಲಾಗಿತ್ತು. ಅಧಿಕ ಸಂಖ್ಯೆಯಲ್ಲಿ ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು.