ಸೋಮವಾರಪೇಟೆ, ಜ. ೨: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಪಟ್ಟಣದಲ್ಲಿ ಮಹಿಳಾ ಸಂಘಟನೆ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆ ದ್ವಿಚಕ್ರ ವಾಹನ ಜಾಥಾ ನಡೆಯಿತು.
ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಅವರ ಸೂಚನೆಯಂತೆ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳ ಸುಬ್ರಮಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಾಥಾದಲ್ಲಿ ೮೫ ಮಂದಿ ಮಹಿಳೆಯರು ದ್ವಿಚಕ್ರ ವಾಹನದೊಂದಿಗೆ ಭಾಗಿಯಾಗಿದ್ದರು.
ಶಾಸಕರಾದ ಅಪ್ಪಚ್ಚು ರಂಜನ್ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶರೀನ್ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಅನಿತಾ ಪೂವಯ್ಯ, ಭುವನೇಶ್ವರಿ, ರಾಜ್ಯ ಸಮಿತಿ ಸದಸ್ಯೆ ವಿಜಯಲಕ್ಷ್ಮಿ ಸುರೇಶ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಅಮಿತ ಪ್ರದೀಪ್, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಪ್ರಧಾನ ಕಾರ್ಯದರ್ಶಿ ಮೋಕ್ಷಿತ್, ಪ್ರಮುಖರಾದ ಭಾರತೀಶ್, ಎಸ್.ಜಿ. ಮೇದಪ್ಪ, ಅಭಿಮನ್ಯು ಕುಮಾರ್, ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ತಂಗಮ್ಮ, ವೇದಾವತಿ ಸಾಮಾಜಿಕ ಜಾಲತಾಣದ ಪ್ರಮುಖರಾದ ಇಂದಿರ ಮೋಣಪ್ಪ, ಭಾನುಮತಿ ಆಕಾಶ್ ಸೇರಿದಂತೆ ಇತರರು ಭಾಗವಹಿಸಿದ್ದರು.