ಕಣಿವೆ, ಜ. ೩: ವಿದ್ಯಾರ್ಥಿಗಳು ಉತ್ತಮ ಸಂಸ್ಕಾರಗಳೊAದಿಗೆ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬೇಕೆಂದು ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕುಶಾಲನಗರದ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದ ಅವರು, ಸರ್ಕಾರಿ ಕಾಲೇಜಿನಲ್ಲಿ ಹಲವು ಮಕ್ಕಳು ಪ್ರತಿಭಾವಂತರಿದ್ದಾರೆ. ಆ ಪ್ರತಿಭೆಗಳಿಗೆ ಪೂರಕವಾದ ವಾತಾವರಣ ದೊರಕಬೇಕು. ಹಾಗಾಗಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡುವ ಮೂಲಕ ಗುರಿ ಸಾಧಿಸಬೇಕೆಂದು ಸಲಹೆಯಿತ್ತರು.
ವಿದ್ಯಾರ್ಥಿಗಳು ವ್ಯಾಸಂಗ ಮುಗಿದೊಡನೆ ಉದ್ಯೋಗ ಕಂಡುಕೊAಡ ಬಳಿಕ ಹೆತ್ತವರನ್ನು ಕಡೆಗಣಿಸಬಾರದೆಂದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಇದೇ ಸಂದರ್ಭ ಹಾಸನದ ಶ್ರೀ ಶಂಭುನಾಥಸ್ವಾಮೀಜಿ, ನಿವೃತ್ತ ಪ್ರಾಂಶುಪಾಲ ಪ್ರೊ. ಜಯಪ್ರಕಾಶ್ ಗೌಡ, ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ಸೀನಪ್ಪ ಇದ್ದರು.