ಕುಶಾಲನಗರ, ಜ. ೩: ಅತ್ತೂರು ಮತ್ತು ಆನೆಕಾಡು ಅರಣ್ಯ ವ್ಯಾಪ್ತಿಯಲ್ಲಿ ಹಾದುಹೋಗುವ ಹೆದ್ದಾರಿ ರಸ್ತೆಯ ಅಂಚಿನಲ್ಲಿ ಚೆಲ್ಲಾಡಿದ್ದ ತ್ಯಾಜ್ಯಗಳನ್ನು ತೆರವುಗೊಳಿಸುವ ಕಾರ್ಯವನ್ನು ಕುಶಾಲನಗರ ವಲಯ ಅರಣ್ಯದ ಸಿಬ್ಬಂದಿ ನಡೆಸಿದರು. ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಮ್ ಮಾಗದರ್ಶನದಲ್ಲಿ ಉಪ ಅರಣ್ಯ ವಲಯಾಧಿಕಾರಿ ದೇವಯ್ಯ, ಡಿಸೋಜಾ ನೇತೃತ್ವದಲ್ಲಿ ಸಿಬ್ಬಂದಿ ರಸ್ತೆ ಬದಿ ಸ್ವಚ್ಛತಾ ಕಾರ್ಯ ಕೈಗೊಂಡರು. ಈ ಮಾರ್ಗವಾಗಿ ತೆÀರಳಿದ್ದ ಪ್ರವಾಸಿಗರು ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆದಿದ್ದು, ಇದು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳದಂತೆ ಮುನ್ನೆಚ್ಚರಿಕೆಯಾಗಿ ಪೊದೆಗಳನ್ನು ತೆರವುಗೊಳಿಸುವ ಕಾರ್ಯವು ನಡೆಯಿತು.