ಮಡಿಕೇರಿ, ಜ. ೩: ಮಡಿಕೇರಿ ಇನ್ನರ್ ವೀಲ್ ಸಂಸ್ಥೆ ವತಿಯಿಂದ ನಗರದ ಚೌಡೇಶ್ವರಿ ದೇವಾಲಯದ ಬಳಿಯಿರುವÀ ಅಂಗನವಾಡಿ ಕೇಂದ್ರಕ್ಕೆ ಕುರ್ಚಿ, ಬೋರ್ಡ್ ಕೊಡುಗೆಯಾಗಿ ನೀಡಲಾಯಿತು. ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್ ಮಾತನಾಡಿ, ಇನ್ನರ್ ವೀಲ್ ಕೊಡುಗೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷೆ ಡಾ. ರೇಣುಕಾ ಸುಧಾಕರ್, ಕಾರ್ಯದರ್ಶಿ ಲಲಿತಾ ರಾಘವನ್, ನಿರ್ದೇಶಕಿಯರಾದ ಶಫಾಲಿ ರೈ, ಶಮ್ಮಿ ಪ್ರಭು, ಉಮಾಗೌರಿ, ಮಲ್ಲಿಗೆ ಪೈ, ರಶ್ಮಿ ಪ್ರವೀಣ್, ಆಗ್ನೇಸ್ ಮುತ್ತಣ್ಣ ಹಾಜರಿದ್ದರು.