ಮುಳ್ಳೂರು, ಜ. ೩: ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರ ಬರವಣಿಗೆ ಶೈಲಿಯಿಂದ ವ್ಯಕ್ತಿಯಲ್ಲಿನ ವ್ಯಕ್ತಿತ್ವವನ್ನು ಗುರುತಿಸಬಹುದು ಎಂದು ಆಲೂರು-ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಮೇನೆಜಿಂಗ್ ಟ್ರಸ್ಟಿ ಹೆಚ್.ಕೆ. ಶಿವಪ್ರಕಾಶ್ ಅಭಿಪ್ರಾಯಪಟ್ಟರು. ಅವರು ಸಮೀಪದ ಬ್ಯಾಡಗೊಟ್ಟ ಗ್ರಾ.ಪಂ. ವ್ಯಾಪ್ತಿಯ ಕ್ಯಾತಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ನಡೆಯುತ್ತಿರುವ ವಾರ್ಷಿಕ ಶಿಬಿರದಲ್ಲಿ ‘ವ್ಯಕ್ತಿತ್ವ ವಿಕಾಸನ ಮತ್ತು ಬರವಣಿಗೆ ಶೈಲಿಯ ರೂಪರೇಷಗಳು’ ವಿಷಯದ ಕುರಿತು ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದರು. ವ್ಯಕ್ತಿಯ ವ್ಯಕ್ತಿತ್ವ ವಿಕಾಸನಗೊಳ್ಳುವುದರಿಂದ ಆತ್ಮವಿಶ್ವಾಸ, ಛಲಗಾರಿಕೆ, ಗುರಿಸಾಧಿಸಬಹುದೆಂಬ ವಿಶ್ವಾಸ ಮುಂತಾದ ವ್ಯಕ್ತಿತ್ವದ ಗುಣಗಳು ಅಭಿವೃದ್ಧಿಗೊಂಡು ಸಮಾಜದಲ್ಲಿ ಅತ್ಯುತ್ತಮ ವ್ಯಕ್ತಿಯಾಗಿ ಹೊರ ಹೊಮ್ಮಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ನಿರ್ದೇಶಕ ಬಿ.ಕೆ. ಯತೀಶ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬ್ಯಾಡಗೊಟ್ಟ ಗ್ರಾ.ಪಂ. ಸದಸ್ಯ ಬಿ.ಕೆ. ದಿನೇಶ್, ಪ್ರಮುಖರಾದ ಕೆ.ಆರ್. ಜಯಪ್ಪ, ಸಚಿನ್, ಕೆ.ಬಿ. ಮಂಜುನಾಥ್, ಕೆ.ವಿ. ಮಲ್ಲೇಶ್, ಕೆ.ಡಿ. ಪುಟ್ಟಸ್ವಾಮಿ, ಎನ್.ಎಸ್.ಎಸ್. ಯೋಜನಾಧಿಕಾರಿ ಕೆ.ಹೆಚ್. ಯೋಗೇಂದ್ರ ಮುಂತಾದವರು ಹಾಜರಿದ್ದರು.