ಗೋಣಿಕೊಪ್ಪಲು, ಜ. ೩: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕುಟ್ಟ ಸಮೀಪದ ಮುಖ್ಯ ರಸ್ತೆಯ ಸುಮಾರು ೧೦೦ ಮೀಟರ್ ದೂರದಲ್ಲಿರುವ ಸರ್ಕಾರಿ ಶಾಲೆಯ ಹಿಂಭಾಗದ ಕಾಫಿ ತೋಟದಲ್ಲಿ ಮೃತದೇಹ ಪತ್ತೆಯಾಗಿದೆ.
ಕಾಫಿ ತೋಟದ ಮಾಲೀಕರು ತಮ್ಮ ತೋಟಕ್ಕೆ ತೆರಳಿದ ವೇಳೆ ಇದು ಕಂಡುಬAದಿದ್ದು, ಕುಟ್ಟ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ, ವೀರಾಜಪೇಟೆ ಡಿವೈಎಸ್ಪಿ ನಿರಂಜನ್ ರಾಜೇ ಅರಸ್, ಗೋಣಿಕೊಪ್ಪ ವೃತ್ತ ನಿರೀಕ್ಷಕ ಗೋವಿಂದರಾಜ್ ಭೇಟಿ ನೀಡಿದ್ದರು.
ಈ ವೇಳೆ ಕುಟ್ಟ ಎಸ್.ಐ. ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಕುಟ್ಟ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತಪಟ್ಟ ವ್ಯಕ್ತಿಯ ಬಗ್ಗೆ ಇನ್ನೂ ಯಾವುದೇ ಮಾಹಿತಿ ದೊರೆತಿಲ್ಲ, ತನಿಖೆ ಮುಂದುವರಿದಿದೆ.
- ಹೆಚ್.ಕೆ. ಜಗದೀಶ್