ಚೀನಾಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

ಬೊಲೆಂಗ್, ಜ. ೩: ಗಡಿಯುದ್ದಕ್ಕೂ ದೇಶದ ಭೂ ಪ್ರದೇಶವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪ್ರತಿಪಾದಿಸುವ ಮೂಲಕ ನೆರೆಯ ರಾಷ್ಟç ಚೀನಾಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬೊಲೆಂಗ್‌ನಲ್ಲಿ ಸೇತುವೆ ಉದ್ಘಾಟಿಸಿ ಮಾತನಾಡಿದ ಸಿಂಗ್, ಭಾರತ ಎಂದಿಗೂ ಯುದ್ಧವನ್ನು ಪ್ರೋತ್ಸಾಹಿಸುವುದಿಲ್ಲ, ನೆರೆಯ ರಾಷ್ಟçಗಳೊಂದಿಗೆ ಯಾವಾಗಲೂ ಸೌಹಾರ್ದ ಯುತ ಸಂಬAಧವನ್ನು ಬಯಸುತ್ತದೆ. ಆದಾಗ್ಯೂ, ಗಡಿಯಲ್ಲಿ ಎದುರಾಗುವ ಯಾವುದೇ ಸವಾಲನ್ನು ಎದುರಿಸುವ ಸಾಮರ್ಥ್ಯವನ್ನು ಭಾರತದ ಸೇನೆ ಹೊಂದಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಿದೆ ಎಂದರು. ಭಾರತ ನೆರೆಹೊರೆಯವರೊಂದಿಗೆ ಶಾಂತಿಯನ್ನು ಬಯಸುತ್ತದೆ. ಇದು ಶ್ರೀರಾಮ ಮತ್ತು ಭಗವಾನ್ ಬುದ್ಧನಿಂದ ಬಂದ ನಮ್ಮ ತತ್ವವಾಗಿದೆ. ಒಂದು ವೇಳೆ ಪ್ರಚೋದಿಸಿದರೆ ಯಾವುದೇ ರೀತಿಯ ಪರಿಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದರು.

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು: ಸ್ಕೂಟಿಯಲ್ಲಿ ಯುವತಿ ಜತೆಗಿದ್ದ ಗೆಳತಿ

ನವದೆಹಲಿ, ಜ. ೩: ದೆಹಲಿಯ ಸುಲ್ತಾನಪುರಿಯಲ್ಲಿ ಭಾನುವಾರ ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರು ವೊಂದು ಸಿಕ್ಕಿದೆ. ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. ಮೃತಳಾದ ಯುವತಿ ಹಾಗೂ ಆಕೆಯ ಸ್ನೇಹಿತೆ ಶನಿವಾರ ರಾತ್ರಿ ಹೊಟೇಲ್ ಒಂದರಲ್ಲಿ ಸ್ನೇಹಿತೆಯ ಬರ್ತ್ಡೇ ಪಾರ್ಟಿಗೆಂದು ತೆರಳಿದ್ದರು. ಅಲ್ಲಿಂದ ಭಾನುವಾರ ಮುಂಜಾನೆ ಇಬ್ಬರೂ ಒಟ್ಟಿಗೆ ಸ್ಕೂಟಿಯಲ್ಲಿ ಬಂದಿದ್ದಾರೆ. ಆಗ ಈ ಅಪಘಾತ ಸಂಭವಿಸಿದೆ. ಒಬ್ಬ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಕೆ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾಳೆ. ಇನ್ನೊಬ್ಬ ಯುವತಿಯ ಕಾಲು ಕಾರಿನ ಚಕ್ರಕ್ಕೆ ಸಿಲುಕಿಕೊಂಡ ಹಿನ್ನೆಲೆ ಆಕೆಯನ್ನು ಕಾರು ಎಳೆದು ಕೊಂಡು ಹೋಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ರಸ್ತೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಸ್ಥಳೀಯರೂ ಕೂಡ ಸ್ಕೂಟಿಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂದು ಹೇಳಿದ್ದಾರೆ. ಈ ಸಂಬAಧ ಸ್ಕೂಟಿಯಲ್ಲಿದ್ದ ಯುವತಿ ಹಾಗೂ ಪಾರ್ಟಿಯಲ್ಲಿದ್ದ ಅವರ ಸ್ನೇಹಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಸಿ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ.

ಪಂಚಭೂತಗಳಲ್ಲಿ ಸಿದ್ದೇಶ್ವರ ಶ್ರೀಗಳು ಲೀನ

ವಿಜಯಪುರ, ಜ. ೩: ನಿನ್ನೆ ಇಹಲೋಕ ತ್ಯಜಿಸಿದ್ದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ಇಂದು ಆಶ್ರಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಶ್ರೀಗಳ ಇಚ್ಛೆಯಂತೆಯೇ ನೆರವೇರಿಸಲಾಯಿತು. ಅಂತಿಮ ದರ್ಶನ ಮುಕ್ತಾಯಗೊಂಡ ಬಳಿಕ ವಿಜಯಪುರದ ಸೈನಿಕ ಶಾಲೆಯಿಂದ ಆಶ್ರಮಕ್ಕೆ ಶ್ರೀಗಳವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ತರಲಾಯಿತು. ಆಶ್ರಮದ ಆವರಣದಲ್ಲಿ ನಿರ್ಮಿಸಿದ್ದ ವೇದಿಕೆಯ ಮೇಲೆ ಶ್ರೀಗಳವರ ಪಾರ್ಥಿವ ಶರೀರವನ್ನಿರಿಸಿ ಆಶ್ರಮದ ಆವರಣದಲ್ಲಿ ಹಲವು ಮಠಾಧೀಶರ ನೇತೃತ್ವದಲ್ಲಿ ಅಂತ್ಯಸAಸ್ಕಾರ ನಡೆಯಿತು. ಶ್ರೀಗಳವರ ಇಚ್ಛೆಯಂತೆ ಸರಳವಾಗಿ ಅಂತ್ಯಕ್ರಿಯೆ ನಡೆದಿದ್ದು ಸುತ್ತೂರು ಶ್ರೀ, ಕನ್ಹೇರಿ ಶ್ರೀ ಬಸವಲಿಂಗ ಶ್ರೀಗಳವರಿಂದ ಸಿದ್ದೇಶ್ವರ ಸ್ವಾಮೀಜಿಗಳ ಚಿತೆಗೆ ಅಗ್ನಿಸ್ಪರ್ಶವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಚಿವರು, ಶಾಸಕರು ಹಾಗೂ ಅಪಾರ ಭಕ್ತರು ಶ್ರೀಗಳವರಿಗೆ ಅಂತಿಮನ ನಮನ ಸಲ್ಲಿಸಿದರು.

ಬಿಜೆಪಿಗೆ ಗುಡ್ ಬೈ ಹೇಳಿದ ನಟಿ ಗಾಯತ್ರಿ ರಘುರಾಮ್

ಚೆನ್ನೆöÊ, ಜ. ೩: ತಮಿಳುನಾಡು ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡು ಬಿಜೆಪಿ ಘಟಕ ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ಬಿಜೆಪಿ ಅಧ್ಯಕ್ಷ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಿಡಿಕಾರಿದ್ದಾರೆ. ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ್ರಿ ರಘುರಾಮ್ ಅವರು ಬಿಜೆಪಿಗೆ ಮಂಗಳವಾರ ರಾಜೀನಾಮೆ ನೀಡಿದ್ದು, ಗಾಯತ್ರಿ ಅವರೇ ಟ್ವೀಟ್ ಮಾಡಿ ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ಮಾಹಿತಿ ಹಂಚಿಕೊAಡಿದ್ದಾರೆ. 'ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ ಎಂದಿರುವ ಅವರು, ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಇದರಿಂದಾಗಿ ನಾನು ಪಕ್ಷ ತೊರೆಯುತ್ತಿದ್ದೇನೆ. ಮೋದಿಜಿ ನೀವು ವಿಶೇಷ, ನೀವು ಯಾವಾಗಲೂ ನನ್ನ ವಿಶ್ವಗುರು ಮತ್ತು ಮಹಾನ್ ನಾಯಕ. ಅಮಿತ್ ಶಾ ಜೀ ನೀವು ಯಾವತ್ತೂ ನನ್ನ ಚಾಣಕ್ಯ ಗುರುಗಳಾಗಿಯೇ ಇರುತ್ತೀರಿ ಎಂದು ಅವರು ಟ್ವೀಟ್ ಮಾಡಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿರುವ ಮಾಜಿ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಗಾಯತ್ರಿ ರಘುರಾಮ್ ಗಂಭೀರ ಆರೋಪ ಮಾಡಿದ್ದು, ಅಣ್ಣಾಮಲೈ ನನ್ನ ವಿರುದ್ಧ ಸುಳ್ಳು ಆರೋಪ ಗಳನ್ನು ಮಾಡಿದ್ದಾರೆ, ೬ ತಿಂಗಳು ಅಮಾನತು ಮಾಡಿ ಪಕ್ಷದಿಂದ ದೂರವಿ ರಿಸಿದರು. ಪಕ್ಷದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಗಾಯತ್ರಿ ರಘುರಾಮ್ ಅವರ ಆರೋಪ ಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ತಳ್ಳಿಹಾಕಿದ್ದು, ಆಕೆಯಿಂದ ಪಕ್ಷಕ್ಕೆ ನಷ್ಟವಿಲ್ಲ ಎಂದಿದ್ದಾರೆ.

ಕೇAದ್ರ ಚುನಾವಣಾ ಆಯೋಗದಿಂದ ಪೂರ್ವ ತಯಾರಿ, ಪರಿಶೀಲನೆ

ಬೆಂಗಳೂರು, ಜ. ೩: ೨೦೨೩ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ನಡೆಸಿದರು. ಎರಡು ದಿನಗಳ ಭೇಟಿಗಾಗಿ ಜನವರಿ ೨ ರಂದು ರಾಜ್ಯಕ್ಕೆ ಆಗಮಿಸಿರುವ ಅವರು ಮೊದಲ ದಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಎರಡನೇ ದಿನ ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳಿಗೆ ಸಂಬAಧಿಸಿದAತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಅವರ ಸಂಬAಧಿಸಿದ ಅಧಿಕಾರಿಗಳ ತಂಡಗಳ ಜೊತೆ ವರ್ಚ್ಯುಯಲ್ ಮೂಲಕ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದರು. ಸಭೆಯಲ್ಲಿ ಇದೇ ತಿಂಗಳು ಪ್ರಕಟವಾಗಲಿರುವ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಗೆ ಸಂಬAಧಿಸಿದAತೆ ಚರ್ಚಿಲಾಯಿತು. ಅದರಲ್ಲೂ ಮುಖ್ಯವಾಗಿ ಅಂತಿಮ ಮತದಾರರ ಪಟ್ಟಿ ತಯಾರಿಕೆಯಲ್ಲಿ ಮೃತ ಪಟ್ಟವರ ಹೆಸರುಗಳನ್ನು ತೆಗೆದು ಹಾಕುವುದು, ವಿಳಾಸ ಬದಲಾದವರ ಹೆಸರುಗಳ ವರ್ಗಾವಣೆ ಮತ್ತು ಹೊಸ ಯುವ ಮತದಾರರ ಹೆಸರುಗಳ ಸೇರ್ಪಡೆ ಕುರಿತಂತೆ ಅನುಸರಿಸಬೇಕಾದ ವಿಧಾನಗಳ ಕುರಿತು ಹೆಚ್ಚು ಒತ್ತು ನೀಡುವಂತೆ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಸಿಯಾಚಿನ್‌ನಲ್ಲಿ ಮೊದಲ ಮಹಿಳಾ ಅಧಿಕಾರಿ ಕರ್ತವ್ಯಕ್ಕೆ ನಿಯೋಜನೆ!

ನವದೆಹಲಿ, ಜ. ೩: ಭೂಮಿ ಮೇಲಿನ ಅತಿ ಎತ್ತರ ಯುದ್ಧಭೂಮಿ ಸಿಯಾಚಿನ್ ನೀರ್ಗಲ್ಲಿನ ಕುಮಾರ್ ಪೋಸ್ಟ್ ಯುದ್ಧಭೂಮಿಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮೊದಲ ಮಹಿಳಾ ಅಧಿಕಾರಿ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಅಧಿಕಾರಿ ಕ್ಯಾಪ್ಟನ್ ಶಿವ ಚೌಹಾಣ್ ಆಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಭಾರತೀಯ ಸೇನೆ, ಸಂಪ್ರದಾಯವನ್ನು ಮುರಿದು ಕ್ಯಾಪ್ಟನ್ ಶಿವ ಅವರು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದೆ. ಕುಮಾರ್ ಪೋಸ್ಟ್ನಲ್ಲಿ ನೇಮಕಗೊಳ್ಳುವ ಮುನ್ನ ತೀವ್ರ ಕಠಿಣ ತರಬೇತಿ ಪಡೆಯಲಿದ್ದಾರೆ. ಭೂಮಿ ಮೇಲಿನ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ನೀರ್ಗಲ್ಲು ಆಗಿದ್ದು, ಇಲ್ಲಿ ೧೯೮೪ ರಿಂದ ಭಾರತ-ಪಾಕಿಸ್ತಾನ ಕದನ ನಡೆಯುತ್ತಲೇ ಇದೆ.