ಕೂಡಿಗೆ, ಜ. ೪: ಚಿಕ್ಕ ಅಳುವಾರದ ಕೊಡಗು ಜ್ಞಾನ ಕಾವೇರಿ ವಿಶ್ವವಿದ್ಯಾನಿಲಯದ ಆರಂಭಕ್ಕೆ ಸಂಬAಧಿಸಿದAತೆ ಪೂರ್ವಭಾವಿ ಸಿದ್ಧತೆಗಳು ನಡೆಯುತ್ತಿವೆ.

ರಾಜ್ಯ ಸರ್ಕಾರ ಈಗಾಗಲೇ ಕೊಡಗು ಜಿಲ್ಲೆಗೆ ವಿಶ್ವವಿದ್ಯಾನಿಲಯದ ಘೋಷಣೆ ಮಾಡಿದ್ದು ಇದಕ್ಕಾಗಿ ರೂ. ೨ ಕೋಟಿ ಹಣವನ್ನು ಬಿಡುಗಡೆಗೊಳಿಸುವ ಎಲ್ಲಾ ಪ್ರಕ್ರಿಯೆಯು ನಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರತ್ಯೇಕಗೊಳ್ಳುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕಾರಿ ವರ್ಗ ಅಳುವಾರದ ಜಾಗ ಮತ್ತು ಅದಕ್ಕೆ ಸಂಬAಧಿಸಿದ ದಾಖಲೆಗಳು ಇತ್ಯಾದಿ ಮಾಹಿತಿಯನ್ನು ಸಂಗ್ರಹಿಸಲು ಚಿಕ್ಕ ಅಳುವಾರ ಗ್ರಾಮದಲ್ಲಿರುವ ಜ್ಞಾನ ಕಾವೇರಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದು ಕೊಡಗು ಜ್ಞಾನ ಕಾವೇರಿ ವಿಶ್ವವಿದ್ಯಾನಿಲಯಕ್ಕೆ ಹಸ್ತಾಂತರಿಸಲು ಸಿದ್ಧತೆಗಳು ನಡೆಯುತ್ತಿವೆ.

ರಾಜ್ಯ ಸರ್ಕಾರದಿಂದ ಉನ್ನತ ಮಟ್ಟದಲ್ಲಿ ಅಧಿಕಾರಿಗಳ ಸಭೆ ನಡೆಯುತ್ತಿದ್ದು, ಕೊಡಗು ವಿಶ್ವವಿದ್ಯಾನಿಲಯ ಆರಂಭಕ್ಕೆ ಸಂಬAಧಿಸಿದAತೆ ಅನೇಕ ಚರ್ಚೆಗಳು ನಡೆದಿವೆ. ಉನ್ನತ ಮಟ್ಟದ ಅಧಿಕಾರಿಗಳ ಸೂಚನೆಯಂತೆ ಕೊಡಗು ವಿಶ್ವವಿದ್ಯಾನಿಲಯದ ಆರಂಭಕ್ಕೆ ಸಂಬAಧಿಸಿದAತೆ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.