ಮಡಿಕೇರಿ, ಜ. ೩: ಮಾನವ-ವನ್ಯಜೀವಿ ಸಂಘರ್ಷವು ಕೊಡಗು ಜಿಲ್ಲೆಯಲ್ಲಿ ಸಾಮಾನ್ಯವಾಗಿದ್ದು, ಭವಿಷ್ಯದಲ್ಲಿ ಇದರ ತಡೆಗೆ ಅಥವಾ ಯಶಸ್ವಿ ನಿರ್ವಹಣೆಗೆ ವಿಜ್ಞಾನದಲ್ಲಿನ ಆವಿಷ್ಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಕ್ಕಳು, ವಿದ್ಯಾರ್ಥಿಗಳು ವಿಜ್ಞಾನದಲ್ಲಿ ತಮ್ಮನ್ನು ತೊಡಗಿಸಿಕೊಂಡು ಶ್ರಮ ವಹಿಸುವಂತಾಗಬೇಕೆAದು ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಅವರು ಆಶಿಸಿದರು. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್.ಸಿ.ಎಸ್.ಟಿ.ಸಿ.), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ-ಸ್ಟೆಪ್ಸ್), ಕೊಡಗು ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಸಹಯೋಗದಲ್ಲಿ ಮಡಿಕೇರಿ ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ‘ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ’ ಎಂಬ ವಿಷಯದಡಿ ೩೦ನೇ ರಾಷ್ಟಿçÃಯ ಮಕ್ಕಳ ವಿಜ್ಞಾನ ಸಮಾವೇಶದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಪರಿಸರ, ವನ್ಯಜೀವಿಗಳು ಇಲ್ಲದೆ ಕೊಡಗು ಜಿಲ್ಲೆಯೇ ಇಲ್ಲ. ಆದರೆ ಇತ್ತೀಚೆಗೆ ಮಾನವ-ವನ್ಯಪ್ರಾಣಿ ಸಂಘರ್ಷಗಳು ಹೆಚ್ಚುತ್ತಿದ್ದು, ಇದನ್ನು ತಡೆಯಲು ಅತ್ಯಾಧುನಿಕ ವೈಜ್ಞಾನಿಕ ಆವಿಷ್ಕಾರದ ಅವಶ್ಯಕತೆ ಇದೆ ಎಂದರು. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ವಿಜ್ಞಾನಾಸಕ್ತಿ ಈ ರೀತಿಯ ಕಾರ್ಯಕ್ರಮಗಳ ಮೂಲಕ ಮೂಡುತ್ತದೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ. ಪ್ರೇಮ್‌ಕುಮಾರ್ ಅವರು ವಿಜ್ಞಾನ, ಪರಿಸರ ಸಂಬAಧಿತ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಪಾತ್ರಧಾರಿಗಳಾಗಿ ಮಾಡುತ್ತಿರುವುದು ಶ್ಲಾಘನೀಯ. ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಕಿರಿಯ ವಿಜ್ಞಾನಿಗಳು

(ಮೊದಲ ಪುಟದಿಂದ) ಪರಿಸರಕ್ಕೆ ಪೂರಕವಾದ ವಿಜ್ಞಾನ ಯೋಜನೆಗಳಲ್ಲಿ ಭಾಗಿಯಾಗಿ ಜಗತ್ತಿನ ಅಭಿವೃದ್ಧಿಗೆ ಮುಂದಾಗಬೇಕೆAದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸಿ. ರಂಗದಾಮಯ್ಯ ಅವರು ಮಾತನಾಡಿ, ಕೇವಲ ರಾಕೆಟ್ ಹಾರಿಸುವುದಾಗಲಿ ಅಥವಾ ಇತರ ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಮಾತ್ರ ವಿಜ್ಞಾನ ಬಳಕೆಯಾಗುವುದಿಲ್ಲ. ನಮ್ಮ ದಿನನಿತ್ಯದ ಜೀವನದಲ್ಲಿಯೂ ವಿಜ್ಞಾನ ಅವಶ್ಯವಿದ್ದು ಅದರ ಬಳಕೆಯನ್ನು ತಿಳಿದುಕೊಳ್ಳಬೇಕು ಎಂದರು.

ಕ್ರೆಸೆAಟ್ ಶಾಲೆಯ ಕಾರ್ಯದರ್ಶಿ ಜಿ.ಹೆಚ್. ಮೊಹಮ್ಮದ್ ಹನೀಫ್ ಅವರು ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣ ಮಾಡಿ ಮನುಷ್ಯರು ತಮ್ಮ ಯೋಗಕ್ಷೇಮ ವೃದ್ಧಿಗೆ ವಿಜ್ಞಾನ ಬಳಸಬೇಕು ಎಂದರು. ನಾವು ಇಂದು ಪ್ರಕೃತಿಯ ಮೇಲೆ ದೌರ್ಜನ್ಯ ಎಸಗಿ ಅದರ ಅಳಿವಿಗೆ ಕಾರಣವಾಗುತ್ತಿದ್ದೇವೆ. ಇದನ್ನು ಕೂಡಲೇ ನಿಲ್ಲಿಸಬೇಕು. ನಾವು ಬದಲಾದರೆ ಮಾತ್ರ ಸಮಾಜ ಬದಲಾಗಲು ಸಾಧ್ಯ ಎಂದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ. ಪ್ರೇಮ್‌ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ವರ್ಷ ನಡೆಯುವ ವಿಜ್ಞಾನ ಸಮಾವೇಶದಲ್ಲಿ ಸುಮಾರು ೩೦ ಮಂದಿ ರಾಷ್ಟçಮಟ್ಟದ ಸಮಾವೇಶಕ್ಕೆ ಆಯ್ಕೆಯಾಗುತ್ತಾರೆ. ಇದರಲ್ಲಿ ಕೊಡಗಿನಿಂದ ಪ್ರತಿ ವರ್ಷ ೨ ರಿಂದ ೩ ಮಂದಿ ವಿಜ್ಞಾನಿಗಳು ಭಾಗವಹಿಸುವುದು ಹೆಮ್ಮೆಯ ವಿಷಯ. ಕಿರಿಯ ವಿಜ್ಞಾನಿಗಳು ಸ್ಥಳೀಯ ಸಮಸ್ಯೆಗಳಾದ ಕಸ ವಿಲೇವಾರಿ, ನೀರಿನ ಸಮಸ್ಯೆ, ವನ್ಯಪ್ರಾಣಿ - ಮಾನವ ಸಂಘರ್ಷ ಇತ್ಯಾದಿಗಳ ಬಗ್ಗೆ ಕೆಲ ಸ್ಥಳಗಳಿಗೆ ಭೇಟಿ ನೀಡಿ ಸರ್ವೆ ಮಾಡಿ ವೈಜ್ಞಾನಿಕ ಪರಿಹಾರ ನೀಡುವ ಸಂಬAಧ ಶ್ರಮ ವಹಿಸಿ ನಂತರ ನಡೆಯುವ ಸ್ಪರ್ಧೆಯಲ್ಲಿ ವಿಚಾರ ಮಂಡನೆ ಮಾಡುತ್ತಾರೆ. ಈ ರೀತಿಯ ಕಾರ್ಯದಿಂದ ಸಮಸ್ಯೆಗಳಿಗೆ ಪರಿಹಾರ ಹುಡುಕುವುದರೊಂದಿಗೆ ಹೊಸ ಶಿಕ್ಷಣ ನೀತಿಗೆ ಪೂರಕ ಕೂಡ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಜ್ಞಾನ ಪರಿಷತ್‌ನ ಪದಾಧಿಕಾರಿ ಹರ್ಷ, ಶಾಲಾ ಸಹ ಕಾರ್ಯದರ್ಶಿ ಲಿಯಾಕತ್ ಆಲಿ, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮಡಿಕೇರಿ ಕ.ಸಾ.ಪ. ಅಧ್ಯಕ್ಷ ನವೀನ್ ಅಂಬೇಕಲ್, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಇ. ಮೊಯಿದ್ದಿನ್, ಶಾಲಾ ಪ್ರಾಚಾರ್ಯರಾದ ಜಾಯ್ಸ್ ವಿನಯ, ಶಾಲಾ ಶಿಕ್ಷಕರು, ಸಂಸ್ಥೆಯ ಖಜಾಂಚಿ ಫಯಾಜ್ ಅಹ್ಮದ್, ವಿಜ್ಞಾನ ವಿಭಾಗದ ಮುಖ್ಯಸ್ಥೆ ಎಂ.ಎಚ್. ಮುಬೀನಾ, ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

ವಿದ್ಯಾರ್ಥಿಗಳ ಪ್ರಕೃತಿ ಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರಕಿತು. ಶಾಲೆಯ ಭಾತ್ಮೀದಾರ ಮುನೀರ್ ಅಹ್ಮದ್ ಅವರು ಸ್ವಾಗತಿಸಿದರು. ಶಿಕ್ಷಕಿ ಸುಲ್‌ಹತ್ ನಿರ್ವಹಿಸಿದರು. ಶಿಕ್ಷಕಿ ಕೆ.ಎಂ. ನೀಲಮ್ಮ ವಂದಿಸಿದರು.

ಗಮನ ಸೆಳೆದ ಮಕ್ಕಳ ವಿಜ್ಞಾನ ಸಮಾವೇಶ - ಕಿರಿಯ ವಿಜ್ಞಾನಿಗಳಿಂದ ವೈಜ್ಞಾನಿಕ ಪ್ರಬಂಧ ಮಂಡನೆ

ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ್ದ ೨೪ ಮಂದಿ ಕಿರಿಯ ವಿಜ್ಞಾನಿಗಳು ತಮ್ಮ ಸುತ್ತಲಿನ ಪ್ರದೇಶದ ಸಮಸ್ಯೆಗಳನ್ನು ವಿವಿಧ ಉಪ ವಿಷಯಗಳ ಕುರಿತು ಮಂಡಿಸಿದ ಪ್ರಬಂಧಗಳು ಗಮನ ಸೆಳೆದವು. ‘ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ-ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ’ ಎಂಬ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳ ಕುರಿತು ವಿವಿಧ ಶಾಲೆಗಳಿಂದ ಆಗಮಿಸಿದ್ದ ಕಿರಿಯ ವಿಜ್ಞಾನಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ವಿಜ್ಞಾನಿಗಳ ಮಾದರಿಯಲ್ಲಿ ಮಂಡಿಸಿ ಗಮನ ಸೆಳೆದರು.

ಸಮಾವೇಶದ ಕೇಂದ್ರ ವಿಷಯದಡಿ 'ನಿಮ್ಮ ಪರಿಸರ ವ್ಯವಸ್ಥೆಯನ್ನು ಅರಿಯಿರಿ’, ‘ಆರೋಗ್ಯ’, ‘ಪೋಷಣೆ ಮತ್ತು ಯೋಗಕ್ಷೇಮವನ್ನು ಬೆಳೆಸುವುದು’, ‘ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭ್ಯಾಸಗಳು’, ‘ಸ್ವಾವಲಂಬನೆಗಾಗಿ ಪರಿಸರ ವ್ಯವಸ್ಥೆ ಆಧಾರಿತ ವಿಧಾನಗಳು’ ಹಾಗೂ ‘ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ತಾಂತ್ರಿಕ ನಾವೀನ್ಯತೆ' ಎಂಬ ಉಪ ವಿಷಯಗಳ ಕುರಿತು ಇಬ್ಬರು ವಿದ್ಯಾರ್ಥಿಗಳನ್ನೊಳಗೊಂಡ ತಂಡಗಳು ವಿವಿಧ ಶೀರ್ಷಿಕೆಗಳಡಿ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಿದವು.

ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ, ಆರೋಗ್ಯ ಮತ್ತು ನೈರ್ಮಲ್ಯ, ಮಣ್ಣಿನ ಆರೋಗ್ಯ ಸಂರಕ್ಷಣೆ, ತ್ಯಾಜ್ಯಗಳ ನಿರ್ವಹಣೆ, ಕಾಡಾನೆ ಮತ್ತು ಮಾನವ ಸಂಘರ್ಷ, ಜಲ ಸಂರಕ್ಷಣೆ, ಜೀವ- ವೈವಿಧ್ಯ ಸಂರಕ್ಷಣೆ, ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಿ - ಪರಿಸರ ಸಂರಕ್ಷಿಸಿ, ಕೊಡಗಿನಲ್ಲಿ ಭತ್ತದ ಬೆಳೆಯ ಕ್ಷೀಣಿಸುವಿಕೆ, ಆರೋಗ್ಯ ರಕ್ಷಣೆ, ಪರಿಸರ ವ್ಯವಸ್ಥೆಯಲ್ಲಿ ಜೇನಿನ ಪಾತ್ರ, ಸಂಸ್ಕೃತಿ ಸ್ವಾಸ್ಥö್ಯ ಮತ್ತು ಸೇವನೆಯಡಿ ಎಲೆತಟ್ಟೆಗಳ ಬಳಕೆ, ಸೂಕ್ತವಾಗಿ ಕಸ ವಿಲೇವಾರಿ, ಆರೋಗ್ಯ ಮತ್ತು ಪರಿಸರ ವ್ಯವಸ್ಥೆಯಡಿ ಆಹಾರ ಸಂರಕ್ಷಕಗಳ ಪ್ರಭಾವ ಎಂಬಿತ್ಯಾದಿ ಉಪ ವಿಷಯಗಳ ಕುರಿತು ವಿದ್ಯಾರ್ಥಿಗಳು ಮಂಡಿಸಿದ ವೈಜ್ಞಾನಿಕ ಪ್ರಬಂಧಗಳು ಗಮನ ಸೆಳೆದವು.