ಮಡಿಕೇರಿ, ಜ. ೪: ಅಮೇರಿಕಾದಲ್ಲಿ ವೈದ್ಯಕೀಯ ವೃತ್ತಿಯಲ್ಲಿರುವ ಕಿಡ್ನಿ ತಜ್ಞ ವೈದ್ಯರಾದ ಡಾ.ಎಂ.ಎ.ಕಾರ್ಯಪ್ಪ ಅವರು ಬುಧವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಕಿಡ್ನಿಗೆ ಸಂಬAಧಿಸಿದAತೆ ಆರೋಗ್ಯ ತಪಾಸಣೆ ಮಾಡಿದರು. ನೂರಾರು ರೋಗಿಗಳು ಕಿಡ್ನಿಗೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿ ಪಡೆದರು.
ಕಿಡ್ನಿಗೆ ಸಂಬAಧಿಸಿದAತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರು. ಆರೋಗ್ಯಕ್ಕೆ ಸಂಬAಧಿಸಿದAತೆ ವಹಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಾ.ಕಾರ್ಯಪ್ಪ ಅವರು ದೇಶದಲ್ಲಿ ಮೂತ್ರಪಿಂಡ ರೋಗಿಗಳ ಸಂಖ್ಯೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಮೂತ್ರಪಿಂಡಕ್ಕೆ ಸಂಬAಧಿಸಿದAತೆ ಹಲವು ಮುನ್ನೆಚ್ಚರಿಕಾ ಕ್ರಮ ವಹಿಸಬೇಕಿದೆ ಎಂದರು.
ಮುAದಿನ ದಿನಗಳಲ್ಲಿ ಪ್ರತಿವರ್ಷ ಕೊಡಗು ಜಿಲ್ಲೆಗೆ ಆಗಮಿಸಿ ಕಿಡ್ನಿಗೆ ಸಂಬAಧಿಸಿದAತೆ ಹೆಚ್ಚಿನ ಆರೋಗ್ಯ ಸೇವೆ ಕಲ್ಪಿಸಲಾಗುವುದು ಎಂದು ಅವರು ಹೇಳಿದರು. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ ಇತರರು ಇದ್ದರು.