ಕೂಡಿಗೆ, ಜ. ೪: ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಬಡಾವಣೆ ಒತ್ತಿನಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಿಂದ ಮಣ್ಣು ಅಗೆದು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಕಾಫಿ ಉದ್ಯಮಿಯೊಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಕಾಫಿ ವರ್ಕ್ಸ್ ಒತ್ತಿನಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಜಾಗದಿಂದ ಎಕ್ಸ್ಕಾವೇಟರ್ ಬಳಸಿ ಮಣ್ಣು ತೆಗೆದು ಸಾಗಿಸಲಾಗುತ್ತಿತ್ತು. ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ವಲಯ ಅರಣ್ಯಾಧಿಕಾರಿ ಶಿವರಾಂ ಮತ್ತು ತಂಡ ಮಣ್ಣು ಸಾಗಾಟಕ್ಕೆ ತಡೆಯೊಡ್ಡಿ ಕಾಫಿ ವರ್ಕ್ಸ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.