ಮಡಿಕೇರಿ, ಜ. ೪: ತಾ.೨೮ ರಂದು ಮಡಿಕೇರಿ ತಾಲೂಕಿನ ೧೧ ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಟ್ಟಗೇರಿಯ ಉದಯ ಪ್ರೌಢಶಾಲೆ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆ ನಿಟ್ಟಿನಲ್ಲಿ ನುಡಿ ಜಾತ್ರೆಗೆ ಎಲ್ಲರೂ ಕೈಜೋಡಿಸುವಂತೆ ಶಾಸಕರು ಹಾಗೂ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಮನವಿ ಮಾಡಿದರು.
ಬೆಟ್ಟಗೇರಿಯ ಉದಯ ಪ್ರೌಢಶಾಲೆ ಸಭಾಂಗಣದಲ್ಲಿ ಬುಧವಾರ ನಡೆದ ಮಡಿಕೇರಿ ತಾಲೂಕು ೧೧ ನೇ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಸಮ್ಮೇಳನ ಯಶಸ್ಸಿಗೆ ಸಹಕರಿಸಬೇಕೆಂದರು.
‘ಅತ್ಯಂತ ಕಡಿಮೆ ಖರ್ಚಿನಲ್ಲಿ ಅಕ್ಷರ ಜಾತ್ರೆಯನ್ನು ಯಶಸ್ಸುಗೊಳಿಸಲು ಎಲ್ಲರೂ ಶ್ರಮಿಸಬೇಕು. ಇದೊಂದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಎಲ್ಲಾ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹೀಗೆ ಎಲ್ಲರೂ ನಾಡು ನುಡಿಗೆ ಕೈಜೋಡಿಸುವಂತೆ ಕೋರಿದರು.’
ಕನಿಷ್ಟ ೫ ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಮಾಡಬೇಕು ಎಂದು ಕೆ.ಜಿ.ಬೋಪಯ್ಯ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ವೇದಿಕೆ, ಸಾಂಸ್ಕೃತಿಕ, ಆಹಾರ, ಮೆರವಣಿಗೆ, ಅಲಂಕಾರ, ಹೀಗೆ ವಿವಿಧ ಉಪ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಬೇಕು.
ಕನ್ನಡ ನಾಡುನುಡಿ ಒಳಗೊಂಡ ಸ್ತಬ್ಧ ಚಿತ್ರ ನಿರ್ಮಾಣ ಮಾಡಬೇಕು. ಈ ಸಂಬAಧ ರಸ್ತೆ ಉದ್ದಕ್ಕೂ ತೋರಣ ಕಟ್ಟುವುದು, ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸುವುದು ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಉಪ ಸಮಿತಿಗಳಿಗೆ ಸಲಹೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್ ಮಾತನಾಡಿ ಬೆಟ್ಟಗೇರಿ ಸುತ್ತಮುತ್ತ ಎಲ್ಲಾ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಸೇರಿದಂತೆ ಎಲ್ಲರೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಬೇಕು ಎಂದು ಕೋರಿದರು.
ಕಸಾಪ ತಾಲೂಕು ಘಟಕದ ಅಧ್ಯಕ್ಷ ಅಂಬೆಕಲ್ ನವೀನ್ ತಾಲೂಕು ಕನ್ನಡ ಸಾಹಿತ್ಯ ಹಬ್ಬಕ್ಕೆ ಎಲ್ಲರೂ ಕೈಜೋಡಿಸುವಂತಾಗಬೇಕು. ಹೊಂದಾಣಿಕೆಯಿAದ ಎಲ್ಲರೂ ತಮ್ಮ ಮನೆಯ ಹಬ್ಬದಂತೆ ಸಮ್ಮೇಳನ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಲೇಖನಗಳನ್ನು ಆಹ್ವಾನಿಸಿ ಸಾಂಕೇತಿಕವಾಗಿ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು. ಈ ಸಂಬAಧ ಎಲ್ಲಾ ರೀತಿಯ ಮಾಹಿತಿ ಸಂಗ್ರಹಿಸಲಾಗುವುದು ಎಂದು ಹೇಳಿದರು. ಪ್ರಮುಖರಾದ ತಳೂರು ಕಿಶೋರ್ ಕುಮಾರ್ ಮಾತನಾಡಿ ಸಮ್ಮೇಳನ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ೧೨ ಉಪ ಸಮಿತಿಯ ಸಂಚಾಲಕರು ಮತ್ತು ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಗ್ರಾ.ಪಂ.ಕಚೇರಿ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಮತ್ತಿತರ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಧರ್ಮಸ್ಥಳ, ಸ್ವಸಹಾಯ, ಸ್ತಿçÃಶಕ್ತಿ, ಹಾಗೆಯೇ ಸಂಜೀವಿನಿ ಒಕ್ಕೂಟ ಹೀಗೆ ಎಲ್ಲರೂ ಸಾಹಿತ್ಯ ಸಮ್ಮೇಳಕ್ಕೆ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೊಸೂರು ಸತೀಶ್ ಕುಮಾರ್ ಸಲಹೆಯಿತ್ತÀರು.
ಸಾಂಸ್ಕೃತಿಕ ಸಮಿತಿಗೆ ಸಂಬAಧಿಸಿದAತೆ ಮಾಹಿತಿ ನೀಡಿದ ಕಡ್ಲೇರ ತುಳಸಿ ಮೋಹನ್ ಕನ್ನಡ ನಾಡು ನುಡಿ, ಜೊತೆಗೆ ಕನ್ನಡ ಸೋದರ ಭಾಷೆಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗುವುದು ಎಂದರು.
ವೇದಿಕೆ ಸಮಿತಿಯ ಪಟ್ಟಡ ಹೇಮಂತ್, ನೈರ್ಮಲ್ಯ ಸಮಿತಿಯ ಪಿಡಿಓ ಉದಯ, ಆರೋಗ್ಯ ಸಮಿತಿ, ಅಲಂಕಾರ ಮತ್ತಿತರ ಸಮಿತಿಯ ಅಧ್ಯಕ್ಷರು ಕಾರ್ಯಕ್ರಮ ಸಂಬAಧಿಸಿದAತೆ ಮಾಹಿತಿ ನೀಡಿದರು.
ನೈರ್ಮಲ್ಯ ಕಾಪಾಡುವಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತೀಯ ಸೇವಾದಳ ಹೀಗೆ ಎಲ್ಲರನ್ನು ತೊಡಗಿಸಿಕೊಳ್ಳಲು ಮನವಿ ಮಾಡುವಂತೆ ರೇವತಿ ರಮೇಶ್ ಅವರು ಸಲಹೆಯಿತ್ತರು. ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷ ನಾಪಂಡ ರ‍್ಯಾಲಿ ಮಾದಯ್ಯ, ಉಪಾಧ್ಯಕ್ಷ ಕೃಷ್ಣಪ್ಪ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ತಾ.ಪಂ.ಇಒ ಶೇಖರ್, ಪ್ರಮುಖರಾದ ಕೊಡಪಾಲು ಗಣಪತಿ, ಕೋಡಿ ಮೋಟಯ್ಯ, ಬೆಪ್ಪುರನ ಮೇದಪ್ಪ, ಸುನಿಲ್ ಪತ್ರಾವೋ, ನೆರವಂಡ ಉಮೇಶ್, ಇತರರು ಇದ್ದರು.