ಮಡಿಕೇರಿ, ಜ. ೪: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ತಾ. ೧೬ ರಿಂದ ಕಲ್ಬುರ್ಗಿಯಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ೩೦ನೇ ಮಕ್ಕಳ ವಿಜ್ಞಾನ ಸಮಾವೇಶ ೨೦೨೨ಕ್ಕೆ ಕೊಡಗು ಜಿಲ್ಲೆಯಿಂದ ೧೬ ಕಿರಿಯ ವಿಜ್ಞಾನಿಗಳನ್ನೊಳಗೊಂಡ ಒಟ್ಟು ೮ ತಂಡಗಳು ಆಯ್ಕೆಯಾಗಿವೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್), ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮಡಿಕೇರಿ ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ಮಂಗಳವಾರ "ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ-ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ" ಎಂಬ ಕೇಂದ್ರ ವಿಷಯದಡಿ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ ೩೦ನೇ ರಾಷ್ಟಿçÃಯ ಮಕ್ಕಳ ವಿಜ್ಞಾನ ಸಮಾವೇಶ ೨೦೨೨ ರಲ್ಲಿ ಉತ್ತಮವಾಗಿ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಿದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಮಕ್ಕಳ ಸಮಾವೇಶದ ಜಿಲ್ಲಾ ಸಂಯೋಜಕ ಜಿ. ಶ್ರೀಹರ್ಷ ತಿಳಿಸಿದ್ದಾರೆ.
ನಗರ ಕಿರಿಯ ವಿಭಾಗ: ಮಡಿಕೇರಿ ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯ ಫಾತಿಮತ್ ಸಿಫಾ ಮತ್ತು ಉಮ್ಮೆ ಹರ್ಮಾನ್ (ವಿಷಯ: ಪರಿಸರ ವ್ಯವಸ್ಥೆಯಲ್ಲಿ ಜೇನುನೊಣಗಳ ಪಾತ್ರ : ಮಾರ್ಗದರ್ಶಿ ಶಿಕ್ಷಕಿ : ಹರ್ಷಿಯಾ ಬಾನು)
(ಮೊದಲ ಪುಟದಿಂದ)
ನಗರ ಹಿರಿಯ ವಿಭಾಗ: ಮಡಿಕೇರಿ ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯ ಕೆ.ಎಂ. ಅನ್ಸಿಫ್ ಮತ್ತು ಲಬೀಬ್ ಅನ್ಸಾರಿ ( ವಿಷಯ : ಪರಿಸರ ವ್ಯವಸ್ಥೆ ಮತ್ತು ಆರೋಗ್ಯ ರಕ್ಷಣೆ, ಮಾರ್ಗದರ್ಶಿ ಶಿಕ್ಷಕಿ ಎಂ.ಝಡ್.ಮುಬೀನಾ), ಇದೇ ಶಾಲೆಯ ಫಾತಿಮ ರಿಫಾ ಮತ್ತು ಅಯೇಷಾ (ವಿಷಯ: ಕೊಡಗಿನಲ್ಲಿ ಕ್ಷೀಣಿಸಿದ ಕಿತ್ತಳೆ ಬೆಳೆ ಮತ್ತು ರಂಶಾ, ಮಾರ್ಗದರ್ಶಿ ಶಿಕ್ಷಕಿ : ಎಂ.ಝಡ್. ಮುಬೀನಾ)
ಗ್ರಾಮಾಂತರ ಕಿರಿಯ ವಿಭಾಗ: ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ಬಿ.ಆರ್. ಚೇತನ್ ಮತ್ತು ಎ. ಅಫ್ರಿನಾ (ವಿಷಯ: ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಕೊನೆ ಎಂದು ? ಮಾರ್ಗದರ್ಶಿ ಶಿಕ್ಷಕಿ : ಟಿ.ವಿ. ಶೈಲಾ) ಹಾಗೂ ಗೌಡಳ್ಳಿಯ ಬಿ.ಜಿ.ಎಸ್. ಶಾಲೆಯ ಬಿ.ಡಿ. ಭವಿಷ್ಯ್ ಮತ್ತು ಡಿ.ಡಿ. ನಿಹಾರಿಕಾ (ವಿಷಯ: ಕೊಡಗಿನಲ್ಲಿ ಭತ್ತದ ಕೃಷಿ ಕ್ಷೀಣಿಸುವಿಕೆ ಮತ್ತು ಮಾರ್ಗದರ್ಶಿ ಶಿಕ್ಷಕಿ : ಸಯ್ಯಜ್ ನಜ್ಮಾ ಸುಲ್ತಾನ):
ಗ್ರಾಮಾಂತರ ಹಿರಿಯ ವಿಭಾಗ: ತೊರೆನೂರು ಸರ್ಕಾರಿ ಪ್ರೌಢಶಾಲೆಯ ನಂದಿತಾ ಮತ್ತು ಆರ್. ವಿಸ್ಮಿತಾ (ವಿಷಯ: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ, ಮಾರ್ಗದರ್ಶಿ ಶಿಕ್ಷಕಿ: ಬಿ.ಪಿ. ಸವಿತ), ಗೌಡಳ್ಳಿ ಬಿ.ಜಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಕೆ.ಹೆಚ್. ಖುಷಿ ಮತ್ತು ಹೆಚ್.ಬಿ. ಸುಕೋದಿನಿ (ವಿಷಯ: ಘನತ್ಯಾಜ್ಯ ವಿಲೇವಾರಿ, ಮಾರ್ಗದರ್ಶಿ ಶಿಕ್ಷಕಿ : ಸಯ್ಯಜ್ ನಜ್ಮಾ ಸುಲ್ತಾನ) ಹಾಗೂ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ಜಿ. ಪ್ರಜ್ವಲ್ ಮತ್ತು ಹೆಚ್.ಎಸ್. ರಾಜೇಶ್ (ವಿಷಯ : ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಿ : ಪರಿಸರ ಸಂರಕ್ಷಿಸಿ, ಮಾರ್ಗದರ್ಶಿ ಶಿಕ್ಷಕ : ಟಿ.ಜಿ. ಪ್ರೇಮಕುಮಾರ್)
ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ್ದ ೨೪ ಮಂದಿ ವಿದ್ಯಾರ್ಥಿಗಳು ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳ ಕುರಿತು ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ಮಂಡಿಸಿ ಗಮನ ಸೆಳೆದರು.
ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಕರೆ
ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಯ ಮೂಲಕ ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿಜ್ಞಾನ ಸಮಾವೇಶದಲ್ಲಿ ಕಿರಿಯ ವಿಜ್ಞಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡರೆ ವಿಜ್ಞಾನ ಕ್ಷೇತ್ರದಲ್ಲಿ ಯಾವುದೇ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ. ಇಂತಹ ವಿಜ್ಞಾನ ಸಮಾವೇಶವು ಮಕ್ಕಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿಗಳು ಜಿಲ್ಲೆಯಲ್ಲಿರುವ ಪ್ರಾಕೃತಿಕ ಹಾಗೂ ಪರಿಸರ ಪೂರಕ ಸಮಸ್ಯೆಗಳನ್ನು ಗುರುತಿಸಿ ಸಮೀಕ್ಷೆ ಕೈಗೊಂಡು ಅವುಗಳನ್ನು ವಿಶ್ಲೇಷಿಸಿ, ಸಂಶೋಧಿಸುವ ಮೂಲಕ ಅವುಗಳಿಗೆ ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳುವ ಮೂಲಕ ಉತ್ತಮ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ತಯಾರಿಸಬೇಕು ಎಂದು ಡಾ ಯತೀಶ್ ಉಳ್ಳಾಲ್ ಸಲಹೆ ನೀಡಿದರು.
‘ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಕೊನೆ ಎಂದು ?' ಎಂಬ ವೈಜ್ಞಾನಿಕ ಯೋಜನಾ ಪ್ರಬಂಧವನ್ನು ಮಂಡಿಸಿ ಜಿಲ್ಲಾಮಟ್ಟದ ಕಿರಿಯ ವಿಜ್ಞಾನಿ ಪ್ರಶಸ್ತಿಗೆ ಭಾಜನರಾದ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ಬಿ.ಆರ್. ಚೇತನ್ಗೆ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ಸೀನಪ್ಪ ಜಿಲ್ಲಾಮಟ್ಟದ ಬಾಲ ವಿಜ್ಞಾನಿ ಪ್ರಶಸ್ತಿ ನೀಡಿ ಗೌರವಿಸಿದರು.
ಡಾ. ಸೀನಪ್ಪ ಮಾತನಾಡಿ, ವಿದ್ಯಾರ್ಥಿಗಳು ಇಂತಹ ವಿಜ್ಞಾನ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಡಾ. ಅಬ್ದುಲ್ ಕಲಾಂ, ಸರ್. ಎಂ. ವಿಶ್ವೇಶ್ವರಯ್ಯ, ಸರ್. ಸಿ.ವಿ. ರಾಮನ್ ಅವರ ಮಾದರಿಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ಸಮಾವೇಶದ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ರೂಪುಗೊಳ್ಳಲು ಮಕ್ಕಳ ವಿಜ್ಞಾನ ಸಮಾವೇಶವು ಸೂಕ್ತ ವೇದಿಕೆ ಕಲ್ಪಿಸುತ್ತದೆ ಎಂದರು.
ವಿದ್ಯಾಸAಸ್ಥೆಯ ಕರೆಸ್ಪಾಡೆಂಟ್ ಎಸ್.ಐ. ಮುನೀರ್ ಅಹ್ಮದ್ ಮಾತನಾಡಿ, ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಜಿಲ್ಲೆಯಲ್ಲಿ ಪರಿಷತ್ತಿನ ಜಿಲ್ಲಾಧ್ಯಕ್ಷ ಟಿ.ಜಿ. ಪ್ರೇಮಕುಮಾರ್ ಮತ್ತು ಅವರ ತಂಡದ ವತಿಯಿಂದ ಶಿಕ್ಷಣ ಇಲಾಖೆಯ ಮೂಲಕ ಮಕ್ಕಳಿಗೆ ವಿಜ್ಞಾನ ಹಾಗೂ ಪರಿಸರ ಪೂರಕ ಚಟುವಟಿಕೆಗಳನ್ನು ಉತ್ತಮವಾಗಿ ಸಂಘಟಿಸುವ ಮೂಲಕ ವಿಜ್ಞಾನ ಕಲಿಕೆಗೆ ಆಸಕ್ತಿ ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದರು.
ವಿಜ್ಞಾನ ಸಮಾವೇಶಕ್ಕೆ ಮಕ್ಕಳಿಂದ ಉತ್ತಮ ಯೋಜನಾ ಪ್ರಬಂಧಗಳನ್ನು ಮಂಡಿಸಲು ಮಾರ್ಗದರ್ಶಿ ಶಿಕ್ಷಕರ ವಿಶೇಷ ಪರಿಶ್ರಮ ಮತ್ತು ಅವರ ಕಾರ್ಯತತ್ಪರತೆಯು ಶ್ಲಾಘನೀಯವಾದುದು ಎಂದರು.
ತೀರ್ಪುಗಾರರ ಪರವಾಗಿ ಮಾತನಾಡಿದ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಸಂಪನ್ಮೂಲ ವ್ಯಕ್ತಿ ಜಿ. ಶ್ರೀನಾಥ್, ವಿದ್ಯಾರ್ಥಿಗಳು ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳಡಿ ಶಿಕ್ಷಕರ ಮಾರ್ಗದರ್ಶನದಲ್ಲಿ ತಮ್ಮ ಸುತ್ತಲಿನ ಸಮಸ್ಯೆಯನ್ನು ಗುರುತಿಸಿ ಸಮೀಕ್ಷೆ ಕೈಗೊಂಡು ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಉತ್ತಮ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ಮಂಡಿಸಬೇಕು ಎಂದರು.
ಸಮಾವೇಶದ ಜಿಲ್ಲಾ ಸಂಯೋಜಕ ಜಿ. ಶ್ರೀಹರ್ಷ, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಪದಾಧಿಕಾರಿ ಎಂ.ಎನ್. ವೆಂಕಟನಾಯಕ್, ಸಂಸ್ಥೆಯ ಉಪಾಧ್ಯಕ್ಷ ಸಿ.ಎ. ಅನೀಸ್, ಖಜಾಂಚಿ ಫಯಾಜ್ ಅಹ್ಮದ್, ನಿರ್ದೇಶಕ ಲಿಯಾಖತ್ ಆಲಿ, ಪ್ರಿನ್ಸಿಪಾಲ್ ಜಾಯ್ಸ್ ವಿನಯ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಎಂ.ಹೆಚ್. ಮುಬೀನಾ ಇತರರು ಇದ್ದರು.
ಶಿಕ್ಷಕಿ ಸುಲ್ ಹತ್ ನಿರ್ವಹಿಸಿದರು. ಶಿಕ್ಷಕಿ ಕೆ.ಎಂ. ನೀಲಮ್ಮ ವಂದಿಸಿದರು.