ಕುಶಾಲನಗರ, ಜ. ೪: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿದಿನ ಕುಶಾಲನಗರದ ಬಸ್ ನಿಲ್ದಾಣದಿಂದ ಅಳುವಾರ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯವನ್ನು ಮಂಗಳವಾರದಿAದ ಕಲ್ಪಿಸಲಾಗಿದೆ. ಪ್ರತಿದಿನ ಬೆಳಿಗ್ಗೆ ೯ ಗಂಟೆಗೆ ಕುಶಾಲನಗರದಿಂದ ಬಸ್ ಹೊರಟು ೯.೪೫ಕ್ಕೆ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರಕ್ಕೆ ತಲುಪಲಿದೆ. ಸಂಜೆ ೫ ಗಂಟೆಗೆ ಕೇಂದ್ರದಿAದ ಕುಶಾಲನಗರಕ್ಕೆ ತಲುಪಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಮೇರೆಗೆ ಸಾರಿಗೆ ಸೌಲಭ್ಯವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು.
ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೇಂದ್ರದ ಪ್ರಬಾರ ನಿರ್ದೇಶಕ ಡಾ. ಕೆ.ಕೆ. ಧರ್ಮಪ್ಪ ತಿಳಿಸಿದ್ದಾರೆ.