ಸೋಮವಾರಪೇಟೆ,ಜ.೫: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಸಂದರ್ಭ ಕಾರ್ಯಾಚರಣೆ ನಡೆಸಿದ ಸೋಮವಾರಪೇಟೆ ಪೊಲೀಸ್ ಸಿಬ್ಬಂದಿಗಳು, ಕೃತ್ಯಕ್ಕೆ ಬಳಸಿದ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ತಾಲೂಕಿನ ನಗರಳ್ಳಿ ಗ್ರಾಮದ ಹೊಳೆಯಿಂದ ಸರ್ಕಾರದ ಯಾವುದೇ ಪರವಾನಗಿ ಇಲ್ಲದೇ ಚೌಡ್ಲು ಗ್ರಾಮದ ಮಂಜುನಾಥ ಬಿ.ಡಿ. ಎಂಬಾತ ತನ್ನ ಟಿಪ್ಪರ್ ವಾಹನ (ಕೆ.ಎ. ೧೨ ಬಿ.೯೦೪೨ದಲ್ಲಿ ಅಕ್ರಮವಾಗಿ ಮರಳನ್ನು

(ಮೊದಲ ಪುಟದಿಂದ) ತುಂಬಿಸಿಕೊAಡು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಸುಳಿವಿನ ಮೇರೆ ಕಾರ್ಯಾಚರಣೆ ನಡೆಸಿದ ಪೊಲೀಸರು, ವಾಹನವನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ. ಆರೋಪಿ ಮಂಜುನಾಥ್ ಪರಾರಿಯಾಗಿದ್ದಾನೆ. ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರನಾಯಕ್ ಅವರ ನಿರ್ದೇಶನದ ಮೇರೆ ಠಾಣಾಧಿಕಾರಿ ರಮೇಶ್ ಕುಮಾರ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.