ನಾಪೋಕ್ಲು, ಡಿ. ೫: ಕರ್ನಾಟಕ ರಾಜ್ಯ ಬಿಜೆಪಿಯ ‘ಬೂತ್ ವಿಜಯ ಅಭಿಯಾನ’ದ ಅಂಗವಾಗಿ ನಾಪೋಕ್ಲು, ಎಮ್ಮೆಮಾಡು, ಬಲ್ಲಮಾವಟಿ, ಪಾರಾಣೆ, ಕಕ್ಕಬ್ಬೆ, ಹೊದ್ದೂರು ಬಿಜೆಪಿ ಶಕ್ತಿ ಕೇಂದ್ರಗಳ ಮಹತ್ವದ ಸಭೆಯನ್ನು ತಾ. ೬ ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ನಾಪೋಕ್ಲು ಶ್ರೀ ಭಗವತಿ ದೇವಸ್ಥಾನ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಕೆ.ಜಿ. ಬೋಪಯ್ಯ, ಮಂಡೆಪAಡ ಅಪ್ಪಚ್ಚು ರಂಜನ್, ಮಂಡೆಪAಡ ಸುಜಾ ಕುಶಾಲಪ್ಪ, ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹಾಗೂ ಇತರ ಗಣ್ಯರು ಭಾಗವಹಿಸಲಿರುವುದಾಗಿ ಪಕ್ಷದ ಪ್ರಕಟಣೆ ತಿಳಿಸಿದೆ.