ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಇಂಜಿನಿಯರಿAಗ್ ವಿದ್ಯಾರ್ಥಿ ವಶಕ್ಕೆ
ಮಂಗಳೂರು, ಜ. ೫: ಎನ್‌ಐಎ ತಂಡವೊAದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿAಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು ವಿದ್ಯಾರ್ಥಿ ಯೋರ್ವನನ್ನು ವಶಕ್ಕೆ ಪಡೆದಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಮಂಗಳೂರಿನ ಪಿಎ ಇಂಜಿನಿಯರಿAಗ್ ಕಾಲೇಜಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಯಾಗಿರುವ ಉಗ್ರ ಶಾರೀಕ್‌ನ ವಿಚಾರಣೆ ನಡೆಸಿದ್ದ ಎನ್‌ಐಎ ಹಲವು ಮಾಹಿತಿಗಳನ್ನು ಪಡೆದಿದ್ದರು. ಅಲ್ಲದೆ ಬಂಧಿತ ಶಂಕಿತ ಉಗ್ರ ಮಾಝ್ ಮುನೀರ್ ಸಹ ಪಿಎ ಎಂಜಿನಿಯರಿAಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದನು. ಈ ಎಲ್ಲಾ ಕಾರಣಗಳಿಗಾಗಿ ಎನ್‌ಐಎ ತಂಡದ ೭ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಝ್ ಮುನೀರ್ ಜೊತೆ ನಿರಂತರ ಸಂಪರ್ಕದಲ್ಲಿದ್ದ ಕೈರಂಗಳ ಗ್ರಾಮದ ನಡುದವಿನ ಇಂಜಿನಿಯರಿAಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರ ದಲ್ಲಿ ಪ್ರಾಯೋಗಿಕವಾಗಿ ಸ್ಫೋಟಕವನ್ನು ಸ್ಫೋಟಿಸಿದ್ದ ಪ್ರಕರಣದಲ್ಲಿ ಮಾಝ್ ಮುನೀರ್‌ನನ್ನು ಬಂಧಿಸಲಾಗಿತ್ತು. ಮಾಝ್ ಮುನೀರ್ ಜೊತೆಗೆ ನಿರಂತರ ಸಂಪರ್ಕ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಜತೆಯಾಗಿ ಭಾಗಿಯಾಗಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಚಿವ ಸಂಪುಟ ನೀಡಿದ ೨ಡಿ ಮೀಸಲಾತಿ ತಿರಸ್ಕರಿಸಿದ್ದೇವೆ
ಬೆಳಗಾವಿ, ಜ. ೫: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ಪಂಚಮಸಾಲಿ ಸಮುದಾಯಕ್ಕೆ ನೀಡಿದ ೨ಡಿ ಮೀಸಲಾತಿಯನ್ನು ನಾವು ತಿರಸ್ಕಾರ ಮಾಡುತ್ತಿದ್ದೇವೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ. ಇಂದು ಬೆಳಗಾವಿಯಲ್ಲಿ ೨ಡಿ ಮೀಸಲಾತಿ ವಿಚಾರವಾಗಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿ, ಮುಂದಿನ ೨೪ ಗಂಟೆಯಲ್ಲಿ ಸಿಎಂ ಬೊಮ್ಮಾಯಿ ಪಂಚಮಸಾಲಿಗೆ ೨ಎ ಮೀಸಲಾತಿ ನೀಡಬೇಕು. ಸಿಎಂ ಮೀಸಲಾತಿ ನೀಡ್ತಿರೋ ಇಲ್ವೋ ಅಂತ ಹೇಳಬೇಕು. ಸಿಎಂ ಮಾತು ತಪ್ಪಿದ್ದಾರೆ ಎಂದು ಇಡೀ ಸಮಾಜದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ ಎಂದರು. ಸಿಎಂ ಬೊಮ್ಮಾಯಿ ಮಾತಿಗೆ ಗೌರವ ಕೊಟ್ಟು ನಾವು ಹೋರಾಟವನ್ನು ತಾತ್ಕಾಲಿಕ ಸ್ಥಗಿತ ಮಾಡಿದ್ದೇವು. ೨ಡಿ ಮೀಸಲಾತಿಯಿಂದ ನಮ್ಮ ಸಮು ದಾಯದ ಜನ ಮತ್ತು ಆಡಳಿತ ಪಕ್ಷದ ಯಾವುದೇ ಶಾಸಕರು ಸಮಾಧಾನ ಗೊಂಡಿಲ್ಲ. ತಾ. ೧೨ ರೊಳಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು. ಇಲ್ಲವಾದರೆ ತಾ. ೧೩ ರಂದು ಶಿಗ್ಗಾಂವಿಯಲ್ಲಿ ೩೦ ಸಾವಿರ ಜನ ಸೇರಿಸಿ ಹೋರಾಟ ಮಾಡುತ್ತೇವೆ. ಜನಶಕ್ತಿ ವ್ಯರ್ಥ ಮಾಡಲು ಬಿಡಲು ಸಾಧ್ಯವಿಲ್ಲ. ಈ ಜನ ಶಕ್ತಿಯೇ ೨೦೨೩ರ ಚುನಾವಣೆಯಲ್ಲಿ ಗಂಭೀರವಾದ ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದರು.
ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ: ಕಾಂಗ್ರೆಸ್ ಟೀಕೆ
ಬೆಂಗಳೂರು, ಜ. ೫: ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಸಿಕ್ಕ ರೂ. ೧೦ ಲಕ್ಷ ಅಕ್ರಮ ಹಣವು ಪೇ ಸಿಎಂ ವಸೂಲಿಗೆ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ. ಈ ಸಂಬAಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ವಿಧಾನಸೌಧದವಷ್ಟೇ ಅಲ್ಲ, ಸಿಎಂ ಬೊಮ್ಮಾಯಿ ಕುರ್ಚಿಯ ಅಡಿಯಲ್ಲೇ ಹವಾಲಾ ದಂಧೆ, ಕಮಿಷನ್ ಲೂಟಿ, ಹಫ್ತಾ ವಸೂಲಿ ನಡೆಯುತ್ತಿದ್ದರೂ ಬೊಮ್ಮಾಯಿ ಅರಿವಿಗೆ ಬಂದಿಲ್ಲ ಎಂದೇನೂ ಇಲ್ಲ. ಅವರ ಶ್ರೀರಕ್ಷೆಯಲ್ಲೇ ಎಲ್ಲಾ ಅಕ್ರಮಗಳು ನಡೆಯುತ್ತಿವೆ ಎಂದು ಅಪಾದಿಸಿದೆ. ಜಗದೀಶ್ ನಿನ್ನೆ ಸಂಜೆ ೫.೩೦ ಸುಮಾರಿಗೆ ೧೦ ಲಕ್ಷದೊಂದಿಗೆ ವಿಧಾನಸೌಧಕ್ಕೆ ಬಂದಾಗ ಸಚಿವ ಸಿ.ಸಿ. ಪಾಟೀಲ್ ಪತ್ರಿಕಾಗೋಷ್ಠಿ ನಡೆಸಿರುತ್ತಾರೆ. ಸಚಿವರ ಹೊರತಾಗಿ ವಿಧಾನಸೌಧದ ಕೆಲಸದ ಅವಧಿ ಮುಗಿದು ಬಹುತೇಕ ಖಾಲಿಯಾಗಿರುತ್ತದೆ. ಈ ಹಣಕ್ಕೂ, ಆ ಸಚಿವರಿಗೂ ಸಂಬAಧವಿದೆಯೇ? ಸರ್ಕಾರ ರಹಸ್ಯ ಕಾಪಾಡುತ್ತಿರುವುದೇಕೆ? ಎಂದು ಪ್ರಶ್ನಿಸಿದೆ. ಮತ್ತೊಂದೆಡೆ ರಾಜ್ಯದ ಪಡಿತರ ಚೀಟಿದಾರರಿಗೆ ಉಚಿತವಾಗಿ ನೀಡಲಾಗುತ್ತಿದ್ದ ೧೦ ಕೆಜಿ ಅಕ್ಕಿಯಲ್ಲಿ ಮುಂದಿನ ತಿಂಗಳಿನಿAದ ೪ ಕೆ.ಜಿ. ಕಡಿತ ಮಾಡುತ್ತಿರುವುದಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಜಾರಿಗೆ ತಂದ ಆಹಾರ ಭದ್ರತಾ ಕಾಯ್ದೆಯ ೫ ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ ಉಳಿದ ೫ ಕೆ.ಜಿ. ಅಕ್ಕಿಯನ್ನು ಸ್ಥಗಿತಗೊಳಿಸಿದ ಕೇಂದ್ರ ಸರ್ಕಾರ ಬಡವರ ಹಸಿದ ಹೊಟ್ಟೆಯನ್ನು ಅಣಕಿಸುತ್ತಿದೆ. ಒಟ್ಟು ೧೦ ಕೆಜಿ ನೀಡುತ್ತಿದ್ದ ಅಕ್ಕಿಯನ್ನು ೬ ಕೆ.ಜಿ.ಗೆ ಇಳಿಸಿದ ಸರ್ಕಾರ ಬಡವರ ಹೊಟ್ಟೆಗೆ ಹೊಡೆದಿದೆ ಎಂದು ಟೀಕಾ ಪ್ರಹಾರ ನಡೆಸಿದೆ.
ಉತ್ತರಾಖಂಡದಲ್ಲಿ ಒತ್ತುವರಿ ತೆರವಿಗೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ, ಜ. ೫: ಹಲ್ದ್ವಾನಿಯಲ್ಲಿ ಅತಿಕ್ರಮಣ ಮಾಡಿಕೊಂಡಿರುವ ರೈಲ್ವೆ ಭೂಮಿಯಲ್ಲಿನ ೨೯ ಎಕರೆ ಒತ್ತುವರಿ ತೆರವಿಗೆ ಸಂಬAಧಿಸಿದAತೆ ಉತ್ತರಾಖಂಡ ಹೈಕೋರ್ಟ್ನ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಒತ್ತುವರಿ ತೆರವಿಗೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ರೈಲ್ವೆ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ. ರೈಲ್ವೇ ಪ್ರಕಾರ, ೪,೩೬೫ ಮಂದಿ ಭೂಮಿ ಅತಿಕ್ರಮಣದಾರರಿದ್ದಾರೆ. ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಎ.ಎಸ್. ಓಕಾ ಅವರಿದ್ದ ಪೀಠವು ಇದು 'ಮಾನವ ಸಮಸ್ಯೆ' ಎಂದು ಗಮನಿಸಿತು ಮತ್ತು ಕೆಲವು ಕಾರ್ಯಸಾಧ್ಯವಾದ ಪರಿಹಾರವನ್ನು ಕಂಡುಹಿಡಿಯಬೇಕಾಗಿದೆ ಎಂದು ಹೇಳಿತು. ಭೂಮಿಯ ಮೇಲಿನ ಯಾವುದೇ ನಿರ್ಮಾಣ ಅಥವಾ ಅಭಿವೃದ್ಧಿಗಾಗಿ ೫೦,೦೦೦ ಜನರನ್ನು ರಾತ್ರೋರಾತ್ರಿ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ ೭ಕ್ಕೆ ಮುಂದೂಡಿದೆ. ಕಳೆದ ವರ್ಷ ಡಿಸೆಂಬರ್ ೨೦ ರಂದು ಹಲ್ದ್ವಾನಿಯ ಬನ್‌ಭೂಲ್‌ಪುರದಲ್ಲಿನ ರೈಲ್ವೆಗೆ ಸಂಬAಧಿಸಿದ ಅತಿಕ್ರಮಣವನ್ನು ತೆರವುಗೊಳಿಸಲು ಹೈಕೋರ್ಟ್ ಆದೇಶಿಸಿತ್ತು.
ಬೆಂಗಳೂರು-ಚೆನ್ನೆöÊ ಎಕ್ಸ್ಪ್ರೆಸ್‌ವೇ ಪ್ರಗತಿ ಪರಿಶೀಲನೆ
ಬೆಂಗಳೂರು, ಜ. ೫: ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಗುರುವಾರ ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಪ್ರಗತಿ ಪರಿಶೀಲನೆ ನಡೆಸಿದರು. ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕೋಲಾರದ ವಡಗಾನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ೨೦೨೪ರ ಜನವರಿಯೊಳಗೆ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಕಾಮಗಾರಿಯನ್ನು ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು. ಬೆಂಗಳೂರು- ಚೆನೈ ಹೈವೇ ಕರ್ನಾಟಕದಲ್ಲಿ ೩ ಪ್ಯಾಕೇಜ್ ಇದ್ದು, ಈ ಪೂರ್ಣ ಎಕ್ಸ್ಪ್ರೆಸ್ ವೇಯನ್ನು ಸುಮಾರು ೧೭೦೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಹಾದು ಹೋಗುವ ಹೆದ್ದಾರಿ ಉದ್ದ ೭೧ ಕಿ.ಮೀ. ಇದ್ದು, ಇದಕ್ಕಾಗಿ ೫೦೯೬ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ವಿವರಿಸಿದರು. ಕರ್ನಾಟಕ ಭಾಗದಲ್ಲಿನ ಹೆದ್ದಾರಿಯ ಕಾಮಗಾರಿ ಪೈಕಿ ಈಗಾಗಲೇ ಶೇ.೩೪ರಷ್ಟು ಪೂರ್ಣಗೊಂಡಿದೆ. ಈ ಎಕ್ಸ್ಪ್ರೆಸ್ ವೇ ಲೋಕಾರ್ಪಣೆಗೊಂಡ ಬಳಿಕ, ಬೆಂಗಳೂರಿನಿAದ ೨.೧೫ ಗಂಟೆಯಲ್ಲಿ ಚೆನ್ನೈಗೆ ಹೋಗಬಹುದು. ಲಾಜಿಸ್ಟಿಕ್ ವೆಚ್ಚ ಉಳಿಸಲು ಇದರಿಂದ ಸಾಧ್ಯವಾಗಲಿದೆ. ದೇಶದಲ್ಲಿ ಸದ್ಯ ಲಾಜಿಸ್ಟಿಕ್ ವೆಚ್ಚ ಶೇ. ೧೬ ರಷ್ಟಿದೆ. ಹಾಗಾಗಿ, ಎಕ್ಸ್ಪ್ರೆಸ್ ವೇಯಿಂದ ಶೇ.೪ರಷ್ಟು ವೆಚ್ಚವನ್ನು ತಗ್ಗಿಸಬಹುದಾಗಿದೆ ಎಂದು ತಿಳಿಸಿದರು.
೧೧ ರಾಜ್ಯಗಳಲ್ಲಿ ಎನ್‌ಐಎ ದಾಳಿ : ೧೦೦ ಮಂದಿ ವಶ
ಮಂಗಳೂರು-ಬೆAಗಳೂರು, ಜ. ೫: ದೇಶಾದ್ಯಂತ ಮತ್ತೊಮ್ಮೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯಗಳು ತನ್ನ ದಾಳಿ, ಶೋಧ ಕಾರ್ಯವನ್ನು ಮುಂದುವರಿಸಿವೆ. ದೇಶಾದ್ಯಂತ ಇಂದು ಗುರುವಾರ ಬೆಳ್ಳಂಬೆಳಗ್ಗೆ ೧೦ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‌ಐಎ, ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಫ್‌ಐ ಸಂಘಟನೆಯ ೧೦೦ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನಲ್ಲಿ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ಕಚೇರಿಗಳು, ಮುಖಂಡರ ನಿವಾಸಗಳ ಮೇಲೆ ದಾಳಿ ನಡೆದಿದೆ. ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.