ಮಡಿಕೇರಿ, ಜ. ೫: ಪ್ರಸಕ್ತ ಸಾಲಿಗೆ ಫ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಶಿಕ್ಷಣ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಪಿ ತಂತ್ರಾAಶದಲ್ಲಿ hಣಣಠಿs://ssಠಿ.ಞಚಿಡಿಟಿಚಿಣಚಿಞಚಿ.gov.iಟಿ ಚಾಲನೆ ಇದ್ದು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ೨೦೨೩ ರ ತಾ. ೧೫ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಿದ ನಂತರ ಸಂಬAಧಿಸಿದ ಶಾಲಾ ಕಾಲೇಜುಗಳ ಲಾಗಿನ್ ಮುಖಾಂತರ ಅನುಮೋದಿಸಿ ವಿಲೇವಾರಿ ಮಾಡಿಸಬೇಕಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ. ೦೮೨೭೨-೨೯೫೮೨೯ ನ್ನು ಹಾಗೂ ೩ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲೂಕು ರಾಜೇಶ್ ಬಿ.ಆರ್. ಮೊ. ೮೦೭೩೧೯೨೯೧೪, ಸೋಮವಾರಪೇಟೆ ತಾಲೂಕು ಹರೀಶ್ ಟಿ.ಆರ್ ೯೦೦೮೬೮೫೧೨೯, ವೀರಾಜಪೇಟೆ ತಾಲೂಕು ಪ್ರಥನ್ ಕುಮಾರ್ ಸಿ.ಬಿ-೯೯೦೦೮೮೩೬೫೪ ನ್ನು ಸಂಪರ್ಕಿಸಬಹುದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

ಗೃಹ ರಕ್ಷಕರ ನೇಮಕಾತಿಗೆ

ಜಿಲ್ಲಾ ಗೃಹರಕ್ಷಕದಳ ಕೊಡಗು ಜಿಲ್ಲೆ ಮಡಿಕೇರಿ ಕಚೇರಿಯಲ್ಲಿ ೨೦೨೨-೨೩ನೇ ಸಾಲಿಗೆ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹ ರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ನಿವಾಸಿ ಯಾಗಿರುವ ೨೦ ವರ್ಷ ಮೇಲ್ಪಟ್ಟ ೪೦ ವರ್ಷದೊಳಗಿನ ಹಾಗೂ ೧೦ನೇ ತರಗತಿ ತೇರ್ಗಡೆ ಹೊಂದಿರುವ ದೃಢಕಾಯರಾಗಿರುವ ಪುರುಷ, ಮಹಿಳಾ ಅಭ್ಯರ್ಥಿಗಳು ತಾ. ೧೩ ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಬಯಸುವ ಸದಸ್ಯರು ಜಿಲ್ಲಾ ಗೃಹರಕ್ಷಕದಳ ಕಚೇರಿ, ಡೈರಿಫಾರಂ ಮಡಿಕೇರಿ (ದೂ. ೦೮೨೭೨-೨೨೮೪೨೭) ಮತ್ತು ಕೊಡಗು ಜಿಲ್ಲೆಯಲ್ಲಿರುವ ಗೃಹ ರಕ್ಷಕದಳದ ಘಟಕ ಕಚೇರಿಯ ಘಟಕಾಧಿ ಕಾರಿಗಳನ್ನು ಸಂಪರ್ಕಿಸಬಹುದು.

ಘಟಕಾಧಿಕಾರಿಗಳ ವಿವರ ಮಡಿಕೇರಿ ಘಟಕ ವೈ.ಎನ್. ಕವನ್ ಕುಮಾರ್ ೯೪೪೮೨೦೪೩೫೬, ಭಾಗ ಮಂಡಲ ಎನ್.ಪಿ. ಲೋಕನಾಥ ೯೧೦೮೨೦೯೯೪೧, ವೀರಾಜಪೇಟೆ ಹೆಚ್.ಸಿ. ತಿಮ್ಮು ೯೬೬೩೭೬೫೮೪೯, ಕುಶಾಲನಗರ ಬಿ.ಕೆ. ಪುಟ್ಟರಾಜು ೯೨೪೨೧೧೬೧೭೪, ಸೋಮವಾರಪೇಟೆ ಹೆಚ್.ಕೆ. ತ್ಯಾಗರಾಜು ೯೪೮೧೪೩೧೨೨೧, ಶಾಂತಳ್ಳಿ ಎಸ್.ಆರ್. ದೇವರಾಜು ೯೪೮೨೭೨೯೨೩೩, ಶನಿವಾರಸಂತೆ ಈ.ಬಿ. ಲೋಕೇಶ ೯೯೦೨೦೪೭೦೭೫ ಇವರಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಘಟಕಾಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಗೃಹ ರಕ್ಷಕದಳದ ಸಮಾದೇಷ್ಟ ಗಜೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ

ಪ್ರಸಕ್ತ ಸಾಲಿನ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆಯ ಸಂದರ್ಭ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಸಂಸ್ಥೆಗಳಿAದ ಹಾಗೂ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಟ ೫ ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

೨೦೨೨-೨೩ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ.

ಜನವರಿ ೧, ೨೦೨೨ ರಿಂದ ಡಿಸೆಂಬರ್ ೩೧, ೨೦೨೨ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗೆ ಕನಿಷ್ಟ ೫ ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ.

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಮತ್ತು ಆಯ್ಕೆಗೆ ಸಂಬAಧಿಸಿದAತೆ ಸಮಿತಿಯ ತೀರ್ಮಾನವೇ ಅಂತಿಮವಾಗಿದೆ. ಈ ಪ್ರಶಸ್ತಿ ಪ್ರದಾನವನ್ನು ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯಂದು ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳಗಳಲ್ಲಿ ಏರ್ಪ ಡಿಸಲಾಗುವುದು. ಇದಕ್ಕೆ ಸಂಬAಧಿಸಿದ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‌ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿಂದ ಪಡೆದು ತಾ. ೧೦ ರೊಳಗೆ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ. ೯೪೮೨೧೯೪೧೦೫, ೯೫೩೫೬೨೬೦೫೩ ನ್ನು ಸಂಪರ್ಕಿಸ ಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕÀ ಎನ್. ಮಂಜುನಾಥ್ ತಿಳಿಸಿದ್ದಾರೆ.

ಟ್ಯಾಬ್ ವಿತರಣೆಗೆ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. ೧೫ ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಆಧಾರ ದಲ್ಲಿ ಟ್ಯಾಬ್ ವಿತರಿಸಲಾಗುವುದು. ೧೦ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತö್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ. ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ ೧೦ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವು ದಾದರೂ ಯೋಜನೆಯಲ್ಲಿ ಇದು ವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಸೋಮ ವಾರಪೇಟೆ ವೃತ್ತ, ವೀರಾ ಜಪೇಟೆ ವೃತ್ತರವರ ಕಚೇರಿಯನ್ನು ಸಂಪರ್ಕಿ ಸಬಹುದೆಂದು ಕಾರ್ಮಿಕಾಧಿಕಾರಿ ಅನಿಲ್ ಬಗಟಿ ತಿಳಿಸಿದ್ದಾರೆ.