ಕೂಡಿಗೆ, ಜ. ೫: ಹೆಬ್ಬಾಲೆಯ ಹಾಸನ ಹೆದ್ದಾರಿಯ ಮುಖ್ಯ ರಸ್ತೆಯ ಸಮೀಪ ಬುಧವಾರ ಸಂಜೆ ನಾರಾಯಣ ಎಂಬವರ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ರೂ. ೭.೫ ಲಕ್ಷ ಬೆಲೆಬಾಳುವ ಚಿನ್ನಾಭರಣ ಮತ್ತು ಬೀರುನಲ್ಲಿದ್ದ ನಗದು ರೂ. ೧೩ ಸಾವಿರ ಕಳ್ಳತನ ಮಾಡಿದ ಘಟನೆ ನಡೆದಿದೆ.

ನಾರಾಯಣ ಅವರು ಸಂಜೆ ೭ ಗಂಟೆಯ ಸಮಯದಲ್ಲಿ ಮನೆಯ ಮುಂಭಾಗದ ಅಂಗಡಿಯಲ್ಲಿದ್ದ ಸಂದರ್ಭ ವಿದ್ಯುತ್ ಕಡಿತಗೊಂಡಿದ್ದ ಸಮಯದಲ್ಲಿ ಮನೆಯೊಳಗೆ ನುಗ್ಗಿ ಕಳ್ಳತನ ಮಾಡಲಾಗಿದೆ ಎಂದು ಅವರು ದೂರು ನೀಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಕುಶಾಲನಗರ ಡಿವೈಎಸ್‌ಪಿ ಗಂಗಾಧರಪ್ಪ, ವೃತ್ತ ನಿರೀಕ್ಷಕ ಮಹೇಶ್, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ಶ್ವಾನದಳ ಮತ್ತು ಬೆರಳಚ್ಚು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆರೋಪಿಗಳನ್ನು ಪತ್ತೆ ಹಚ್ಚಲು ಈಗಾಗಲೇ ಪೊಲೀಸರ ನಾಲ್ಕು ತಂಡಗಳನ್ನು ರಚನೆ ಮಾಡಿ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.