ಸಿದ್ದಾಪುರ, ಜ. ೭: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟಿçÃಯ ಸೇವಾ ಯೋಜನೆ, ವೀರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜು ಆಶ್ರಯದಲ್ಲಿ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚೆನ್ನಂಗಿ-ಬಸವನಹಳ್ಳಿಯ ದಿಡ್ಡಳ್ಳಿ ಸರಕಾರಿ ಗಿರಿಜನ ಆಶ್ರಮ ಶಾಲೆಯಲ್ಲಿ ಆದಿವಾಸಿ ಬುಡಕಟ್ಟು ಜನಾಂಗದ ಮುಖಂಡ ಜಿ.ಕೆ. ಅಪ್ಪಾಜಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಆದಿವಾಸಿಗಳು ಹೆಚ್ಚಾಗಿರುವ ದಿಡ್ಡಳ್ಳಿ ಹಾಡಿಯಲ್ಲಿ ಶಿಬಿರ ಆಯೋಜನೆ ಮಾಡುವ ಮೂಲಕ ಶಿಕ್ಷಣ, ಆರೋಗ್ಯ, ಪರಿಸರ, ಶುಚಿತ್ವ ಸೇರಿದಂತೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಆದಿವಾಸಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ವಿಶೇಷ ಶಿಬಿರವನ್ನು ಆಯೋಜಿಸ ಲಾಗಿದೆ. ಇಂತಹ ಶಿಬಿರದ ಸೇವೆಗಳನ್ನು ಎಲ್ಲಾ ಆದಿವಾಸಿಗಳು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.

ಸೆಂಟ್ ಆನ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ವಿವಿಧ ಇಲಾಖೆಗಳ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದು, ತಾ. ೯ ರವರೆಗೆ ನಡೆಯಲಿರುವ ಶಿಬಿರದಲ್ಲಿ ಶಿಕ್ಷಣ, ಆರೋಗ್ಯ, ಪರಿಸರ, ಶುಚಿತ್ವ, ಶ್ರಮದಾನ ಸೇರಿದಂತೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸರಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಲು ಗ್ರಾಮೀಣ ಭಾಗದ ಜನರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಶಿಬಿರದ ಅಂಗವಾಗಿ ಪರಿಸರ ಪ್ರೇಮಿ ರಾಜೇಂದ್ರ ಸಿಂಗ್ ನೇತೃತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ. ಜಡೇಗೌಡ, ಚೆನ್ನಯ್ಯನಕೋಟೆ ಗ್ರಾ.ಪಂ. ಅಧ್ಯಕ್ಷ ಮೇಕೇರಿರ ಅರುಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಸೈಂಟ್ ಆನ್ಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಸರಕಾರಿ ಗಿರಿಜನ ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ಸಿದ್ಧಲಿಂಗ ಶೆಟ್ಟಿ, ಕಲಾವಿದ ಬಾವ ಮಾಲ್ದಾರೆ, ಮಾಲ್ದಾರೆ ಗ್ರಾ.ಪಂ. ಸದಸ್ಯೆ ಶೋಭಾ ಸೇರಿದಂತೆ ಮತ್ತಿತರರು ಪಾಲ್ಗೊಂಡರು.