ನಾಪೋಕ್ಲು, ಜ. ೬: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರದ ಗದ್ದುಗೆ ಏರಲು ಕಾರ್ಯಕರ್ತರು ತಳಮಟ್ಟದಿಂದಲೇ ಶ್ರಮಿಸಿ ಪಕ್ಷದ ಸಾಧನೆಗಳನ್ನು ಪ್ರತಿಯೊಬ್ಬ ಮತದಾರನಿಗೂ ಮನವರಿಕೆ ಮಾಡಿಕೊಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಕರ್ನಾಟಕ ರಾಜ್ಯ ಬಿಜೆಪಿಯ ಬೂತ್ ವಿಜಯ ಅಭಿಯಾನದ ಅಂಗವಾಗಿ ನಾಪೋಕ್ಲು ಭಗವತಿ ದೇವಸ್ಥಾನ ಸಮುದಾಯ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು.
ಪ್ರಧಾನಿ ಮೋದಿ ಅವರ ಉತ್ತಮ ಆಡಳಿತ ಹಾಗೂ ಪಕ್ಷದ ತತ್ವ ಸಿದ್ಧಾಂತಗಳ ಆಧಾರದಲ್ಲಿ ಮತಯಾಚನೆ ಮಾಡಿ ಸದೃಢ ಸರ್ಕಾರವನ್ನು ಅಧಿಕಾರಕ್ಕೆ ತರಲು ಮುಂದಾಗಬೇಕು ಎಂದರು. ಶಾಸಕ ಕೆ.ಜಿ. ಬೋಪಯ್ಯ, ಮಂಡೇಪAಡ ಅಪ್ಪಚ್ಚುರಂಜನ್, ಮಂಡೇಪAಡ ಸುಜಾಕುಶಾಲಪ್ಪ, ರಾಜ್ಯ ಸಮಿತಿ ಸದಸ್ಯ ಅಪ್ಪಚೆಟ್ಟೋಳಂಡ ಮನುಮುತ್ತಪ್ಪ ಮಾತನಾಡಿ ಮುಂದಿನ ಚುನಾವಣೆಯಲ್ಲಿ ಗೆಲುವಿಗೆ ಬೇಕಾದ ಕಾರ್ಯತಂತ್ರದ ಬಗ್ಗೆ ಮಾರ್ಗದರ್ಶನ ಹಾಗೂ ಅನಿಸಿಕೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಶಿವಚಾಳಿಯಂಡ ಅಂಬಿಕಾರ್ಯಪ್ಪ, ಬಲ್ಲಮಾವಟಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಚಂಗೇಟಿರ ಕುಮಾರ್ ಸೋಮಣ್ಣ, ಕಕ್ಕಬ್ಬೆ ಬಿಜೆಪಿ ಶಕ್ತಿಕೇಂದ್ರದ ಪ್ರಮುಖ ಕಲಿಯಂಡ ಸುನಂದ, ಪಾರಾಣೆ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಅಪ್ಪನೆರವಂಡ ರಾಜ, ಎಮ್ಮೆಮಾಡು ಬಿಜೆಪಿ ಶಕ್ತಿಕೇಂದ್ರದ ಪ್ರಮುಖ ಚಂಬರAಡ ಮಾಹಿನೆ, ಹೊದ್ದೂರು ಬಿಜೆಪಿ ಶಕ್ತಿಕೇಂದ್ರದ ಪ್ರಮುಖ ನೆರವಂಡ ಸಂಜಯ್ ಪೂಣಚ್ಚ, ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಕಾಂಗಿರ ಅಶ್ವಿನ್, ಜಿಲ್ಲಾ ಸಮಿತಿ ಸದಸ್ಯ ಕರವಂಡ ಲವ ನಾಣಯ್ಯ, ಕುಂಡಿಯೋಳAಡ ರಮೇಶ್ ಮುದ್ದಯ್ಯ, ಅಮ್ಮಂಡ ಮನು ಮಹೇಶ್, ಚಂಡಿರ, ಜಗದೀಶ್, ಸಾಮಾಜಿಕ ಜಾಲತಾಣಗಳ ಸದಸ್ಯ ಕರವಂಡ ಅಪ್ಪಣ್ಣ, ಕೋಡಿರ ಪ್ರಸನ್ನ, ಬಿಜೆಪಿ ಪಕ್ಷದ ಚುನಾಯಿತ ಪ್ರತಿನಿಧಿಗಳು ಹಾಗೂ ಹಿರಿಯ ಕಾರ್ಯಕರ್ತರು, ಎಲ್ಲಾ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಜಿಲ್ಲಾ ಸಮಿತಿ ಸದಸ್ಯರು ನಿರ್ದೇಶಕರು, ವಿವಿಧ ನಾಯಕರು ಉಪಸ್ಥಿತರಿದ್ದರು.