ಮಡಿಕೇರಿ, ಜ. ೬: ಮಡಿಕೇರಿಯ ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಕ್ರೀಡಾ ದಿನಾಚರಣೆ ಏರ್ಪಡಿಸಲಾಗಿತ್ತು. ಕ್ರೀಡಾಕೂಟಕ್ಕೆ ಶ್ರೀ ರಾಜೇಶ್ವರಿ ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕಾರ್ಯದರ್ಶಿ ಸಚಿನ್ ವಾಸುದೇವ್, ಉಪಾಧ್ಯಕ್ಷೆ ದಾಕ್ಷಾಯಿಣಿ ವಾಸುದೇವ್, ಸಂಸ್ಥೆಯ ಸದಸ್ಯ ಅನಿಲ್ ಕೃಷ್ಣಾನಿ, ಪ್ರಾಂಶುಪಾಲೆ ಲಕ್ಷಿö್ಮ ಸಚಿನ್ ಅವರು ಪಾಲ್ಗೊಂಡಿದ್ದರು.
ಕ್ರೀಡಾ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಂಜೆ ಸಮಾರೋಪ ಸಮಾರಂಭದೊAದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.