ಕೂಡಿಗೆ, ಜ. ೬: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರದ ಸಮುದಾಯ ಭವನದಲ್ಲಿ ಇ-ಶ್ರಮ್ ಯೋಜನೆಯ ಅರಿವು ಕಾರ್ಯಕ್ರಮ ಹಾಗೂ ನೋಂದಣಿ ಅಭಿಯಾನ ನಡೆಯಿತು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರ ದತ್ತಾಂಶ ಅಲಭ್ಯತೆಯ ಕಾರಣ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡನ್ನು ನೀಡಲಾಗುತ್ತಿದೆ. ಪ್ರತಿಯೊಬ್ಬ ಕಾರ್ಮಿಕರ ಇ-ಶ್ರಮ್ ಕಾರ್ಡ್ಗೆ ನೋಂದಾಯಿಸಿಕೊAಡು, ಅದರ ಉಪಯೋಗವನ್ನು ಪಡೆಯಬೇಕು ಎಂದು ತಿಳಿಸಿದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ. ಷಂಶುದ್ದೀನ್, ಅಸಂಘಟಿತ ವಲಯದ ಕಾರ್ಮಿಕರು ಕಡ್ಡಾಯವಾಗಿ ಇ-ಶ್ರಮ್ ಕಾರ್ಡನ್ನು ಪಡೆದುಕೊಳ್ಳಬೇಕು. ಇ-ಶ್ರಮ್ ಕಾರ್ಡ್ ಪಡೆದವರು, ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಎರಡು ಲಕ್ಷ ಹಣ ಪರಿಹಾರ ಹಣ ದೊರೆಯಲಿದೆ. ಅಂಗವಿಕಲತೆಗೆ ಒಂದು ಲಕ್ಷ ಪರಿಹಾರ ಹಣ ದೊರೆಯುತ್ತದೆ. ಪ್ರತಿಯೊಬ್ಬರೂ ಇದರ ಉಪಯೊಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಮಿಕ ಸಂಘಟನೆ ಪ್ರಮುಖರಾದ ಗೋವಿಂದರಾಜ್ ದಾಸ್, ಕಾರ್ಮಿಕ ಇಲಾಖೆಯ ಸಿಬ್ಬಂದಿ ಸೇರಿದಂತೆ ಗ್ರಾಮದ ಪ್ರಮುಖರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಸುಂದರನಗರ, ಬಸವೇಶ್ವರ ಬಡಾವಣೆ, ವಿನಾಯಕ ಬಡಾವಣೆ ಹಾಗೂ ನವಗ್ರಾಮದ ೧೦೦ಕ್ಕೂ ಹೆಚ್ಚು ಕಾರ್ಮಿಕರು ಇ-ಶ್ರಮ್ ಕಾರ್ಡ್ಗೆ ನೋಂದಾಯಿಸಿಕೊAಡರು.