ಕುಶಾಲನಗರ, ಜ. ೬: ಕೂಡಿಗೆ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಯನ್ನು ಪರಿಶೀಲಸಿ, ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಸೂಚನೆ ನೀಡಿದ್ದಾರೆ.

‘ಶಕ್ತಿ’ಯಲ್ಲಿ ಪ್ರಕಟಗೊಂಡ ತನಿಖಾ ವರದಿಗೆ ಪ್ರತಿಕ್ರಿಯಿಸಿರುವ ರಂಜನ್, ಕಾಮಗಾರಿಯಲ್ಲಿ ಕೆಲವು ಬಿಲ್ ಪಾವತಿಯಾಗಿದ್ದು, ದುರುಪಯೋಗವಾಗಿರುವ ಬಗ್ಗೆ ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರ ಮುಖೇನ ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬAಧಿಸಿದAತೆ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಲಿಖಿತ ದೂರು ನೀಡಿದ್ದು, ಕೂಡಿಗೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಲಿಖಿತವಾಗಿ ದೂರು ಸಲ್ಲಿಸಿದ್ದಾರೆ.

ಕೂಡಿಗೆ ಗ್ರಾಮ ಪಂಚಾಯಿತಿಯಲ್ಲಿ ತನ್ನ ಗಮನಕ್ಕೆ ಬರದೆ ಕೆಲವು ಹಣಕಾಸಿನ ದುರುಪಯೋಗ ನಡೆದಿರುವ ಸಾಧ್ಯತೆ ಇದೆ. ಗ್ರಾಮ ಪಂಚಾಯಿತಿಗೆ ಸಂಬAಧವಿಲ್ಲದ ಇತರ ಇಲಾಖೆಗಳಿಗೆ ಒಳಪಡುವ ಕಾಮಗಾರಿಗಳನ್ನು ನಿಯಮಬಾಹಿರವಾಗಿ ನಡೆಸುತ್ತಿದ್ದಾರೆ. ಈ ಸಂಬAಧ ಯಾವುದೇ ದುರುಪಯೋಗವಾಗಿದ್ದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ್ ಆರಪೇಟರ್ ನೇರ ಹೊಣೆಗಾರರಾಗುತ್ತಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಕೆಲವು ಸದಸ್ಯರು ಮತ್ತು ಅಧಿಕಾರಿಗಳು ಸೇರಿ ತನ್ನನ್ನು ವೈಯಕ್ತಿಕವಾಗಿ ಅವಮಾನಿಸಿ ತೇಜೋವಧೆ ಮಾಡುತ್ತಿದ್ದಾರೆ. ಈ ಎಲ್ಲಾ ವಿಷಯಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸುವಂತೆ ಮಂಗಳ ಪ್ರಕಾಶ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಸಂದರ್ಭ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳ ಪ್ರಕಾಶ್ ‘ಶಕ್ತಿ’ಗೆ ತಿಳಿಸಿದ್ದಾರೆ.

ಕೂಡಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷ, ಕಂಪ್ಯೂಟರ್ ಆಪರೇಟರ್ ಜ್ಯೋತಿ ಮತ್ತು ಪಂಚಾಯಿತಿ ಇಂಜಿನಿಯರ್ ಇವರುಗಳು ನರೇಗ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಭುವನಗಿರಿಯ ಗ್ರಾಮಸ್ಥ ಕೆ.ಸಿ. ನಂಜುAಡ ಸ್ವಾಮಿ ಅವರು ದಾಖಲೆ ಸಹಿತ ದೂರು ನೀಡಿದ್ದು, ೨೦೨೨-೨೧, ೨೦೨೨-೨೩ ರ ನರೇಗ ಉದ್ಯೋಗ ಖಾತ್ರಿ ಕಾಮಗಾರಿಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೂಡಿಗೆ ಗ್ರಾಮ ಪಂಚಾಯಿತಿಯಲ್ಲಿ ನೊಂದಾಯಿಸಿರುವ ಕೂಲಿ ಕಾರ್ಮಿಕರ ಜಾಬ್ ಕಾರ್ಡ್ಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಅವರು ಒತ್ತಾಯಿಸಿದ್ದಾರೆ. ಪಂಚಾಯಿತಿ ಸದಸ್ಯರು ಸೇರಿದಂತೆ ಕುಟುಂಬ ಸದಸ್ಯರು ಹಾಗೂ ಹಲವು ಮಧ್ಯವರ್ತಿಗಳ ಹೆಸರಿನಲ್ಲಿ ಪಂಚಾಯಿತಿಯಿAದ ಬ್ಯಾಂಕ್ ಖಾತೆಗಳಿಗೆ ಲಕ್ಷಾಂತರ ರೂಪಾಯಿ ವರ್ಗಾವಣೆಗೊಂಡಿರುವುದಾಗಿ ಅವರು ದಾಖಲೆ ಸಹಿತ ದೂರು ನೀಡಿದ್ದಾರೆ.

- ಚಂದ್ರಮೋಹನ್