ಎಕ್ಸ್ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಿಲ್ಲ ಪ್ರವೇಶ
ಮೈಸೂರು, ಜ. ೬: ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಅವಕಾಶ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಶುಕ್ರವಾರ ಹೇಳಿದ್ದಾರೆ. ಮೈಸೂರಿನ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೈಸೂರು-ಬೆಂಗಳೂರು ದಶಪಥ ಕಾಮಗಾರಿಯನ್ನು ವೀಕ್ಷಿಸಿ ಉತ್ತಮವಾಗಿದೆ. ಇದೇ ಫೆಬ್ರವರಿ ಅಥವಾ ಮಾರ್ಚ್ಗೆ ಈ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿ ಉದ್ಘಾಟನೆಗೊಳಿಸಲಾಗುವುದು ಎಂದು ಹೇಳಿದರು. ಇನ್ನು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಳಿಗೆ ಪ್ರವೇಶ ಇಲ್ಲ ಎಂದು ಹೇಳಿರುವ ಪ್ರತಾಪ್ ಸಿಂಹ ಅವರು, ಸರ್ವಿಸ್ ರಸ್ತೆ ನಿರ್ಮಾಣವಾದ ಬಳಿಕ ಈ ರಸ್ತೆಯಲ್ಲಿ ದ್ವಿಚಕ್ರ ಮತ್ತು ಮೂರು ಚಕ್ರದ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ. ಯಾಕೆಂದರೆ ಇದು ಎಕ್ಸ್ಪ್ರೆಸ್ ಹೈವೇ ಆಗಿರುವುದರಿಂದ ಬಹಳಷ್ಟು ಮಂದಿ ಮೈಸೂರು-ಬೆಂಗಳೂರು ನಡುವೆ ವೇಗವಾಗಿ ಸಂಚರಿಸುತ್ತಿರುತ್ತಾರೆ. ಈ ಮಧ್ಯೆ ದ್ವಿಚಕ್ರ ವಾಹನಗಳಿಗೆ ಅವಕಾಶ ನೀಡಿದರೆ ಅವರ ವೇಗದ ಮಿತಿ ಕಡಿಮೆಯಾಗಬಹುದು. ಅಲ್ಲದೆ ದ್ವಿಚಕ್ರ ವಾಹನಗಳು ಲೇನ್ ನಿಯಮ ಪಾಲಿಸುವುದು ಕಡಿಮೆ. ಇದು ಅಪಘಾತಗಳಿಗೆ ಕಾರಣವಾಗಬಹುದು. ದ್ವಿಚಕ್ರ ವಾಹನಗಳು ಮತ್ತು ಇತರ ವಾಹನಗಳು ಸಂಚರಿಸಲು ಸರ್ವೀಸ್ ರಸ್ತೆಗಳಿರುತ್ತದೆ. ಆ ಮೂಲಕ ಸಂಚರಿಸಬಹುದು ಎಂದು ತಿಳಿಸಿದರು. ಎಕ್ಸ್ಪ್ರೆಸ್ ಹೈವೆಯಲ್ಲಿ ಸಂಚರಿಸುವ ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗುತ್ತದೆ. ೧.೩೦ ಗಂಟೆಯಲ್ಲಿ ಬೆಂಗಳೂರಿನಿAದ ಮೈಸೂರು ತಲುಪಬಹುದು. ಹಾಗಂತ ಈ ರಸ್ತೆ ಬರಿ ಶ್ರೀಮಂತರಿಗಾಗಿ ಎಂದು ಭಾವಿಸಬಾರದು ಎಂದರು. ಎಕ್ಸ್ಪ್ರೆಸ್ ಹೈವೆ ಹೆಸರಿಡುವ ಕುರಿತು ಹಲವಾರು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವರು ನಾಲ್ವಡಿ ಕೃಷ್ಣರಾಜ ಒಡೆಯರ್, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೆಸರಿಡುವಂತೆ ಪ್ರಸ್ತಾಪಿಸಿದ್ದಾರೆ. ಆದರೆ ಯಾವುದೇ ಎಕ್ಸ್ಪ್ರೆಸ್ ಹೈವೆಗೆ ವ್ಯಕ್ತಿಗಳ ಹೆಸರಿಟ್ಟ ಉದಾಹರಣೆ ಇಲ್ಲ. ಉತ್ತರ ಪ್ರದೇಶದಲ್ಲಿ ಗಂಗಾ-ಯಮುನಾ ಎಕ್ಸ್ಪ್ರೆಸ್ ವೇ ಅಂತಿದೆ. ಹೀಗಾಗಿ ನದಿಗಳ ಪಾವಿತ್ರ್ಯತೆ ಕುರಿತು ನೀಡಲಾಗಿದ್ದು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಗೂ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ನಾಮಕರಣ ಮಾಡಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಬಾಗಲಕೋಟೆ: ಟ್ರಾö್ಯಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣ
ಬಾಗಲಕೋಟೆ, ಜ. ೬: ಮುಧೋಳ ತಾಲೂಕಿನ ಕುಳಲಿ ಬಳಿ ಟ್ರಾö್ಯಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ೧೮ ವರ್ಷದ ಸದಾಶಿವ ಬೆಳಗಲಿ, ೨೦ ವರ್ಷದ ಗೋವಿಂದ ಹಾಗೂ ೨೨ ವರ್ಷದ ಹನುಮಂತ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಸದಾಶಿವ ಬೆಳಗಲಿ ಗಂಭೀರ ಗಾಯಗೊಂಡಿದ್ದರು. ಆತನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕರಿಯಾಗದೆ ಸಾವನ್ನಪ್ಪಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ
ಮಂಗಳೂರು, ಜ. ೬: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ‘ನೈತಿಕ ಪೊಲೀಸ್ ಗಿರಿ’ ಪ್ರಕರಣ ವರದಿಯಾಗಿದ್ದು, ಗುರುವಾರ ಸಂಜೆ ಸುಬ್ರಹ್ಮಣ್ಯದಲ್ಲಿ ಹತ್ತು ಅಪರಿಚಿತ ವ್ಯಕ್ತಿಗಳ ಗುಂಪೊAದು ೨೦ ವರ್ಷದ ಮುಸ್ಲಿಂ ಯುವಕನನ್ನು ವಿವಸ್ತçಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿದೆ. ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಅಫೀದ್ ಎಂಬ ಯುವಕ ೧೭ ವರ್ಷದ ಹಿಂದೂ ಯುವತಿಯೊಂದಿಗೆ ಇನ್ಸ್ಟಾಗ್ರಾಮ್ನಲ್ಲಿ ಸ್ನೇಹ ಬೆಳೆಸಿದ್ದು, ಆಕೆಯನ್ನು ಬಸ್ ನಿಲ್ದಾಣದಲ್ಲಿ ಭೇಟಿ ಮಾಡುತ್ತಿದ್ದ ಎನ್ನಲಾಗಿದೆ. ಸುಬ್ರಹ್ಮಣ್ಯದ ಕಾಲೇಜೊಂದರ ವಿದ್ಯಾರ್ಥಿನಿಯಾಗಿರುವ ಬಾಲಕಿ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಅಫಿದ್ನನ್ನು ಭೇಟಿಯಾಗುತ್ತಿದ್ದಳು ಮತ್ತು ಈ ಹಿಂದೆ ಕೆಲವು ವ್ಯಕ್ತಿಗಳು ಅವರನ್ನು ಗಮನಿಸಿದ್ದರು. ಗುರುವಾರವೂ ಬಾಲಕಿ ಬಸ್ ನಿಲ್ದಾಣಕ್ಕೆ ಆಗಮಿಸಿ ಅಫೀದ್ ಜತೆ ಮಾತನಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಜೀಪಿನಲ್ಲಿ ಬಂದು ಅಫಿದ್ ನನ್ನು ಹಳೆ ಕಟ್ಟಡಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ೧೦ ರಿಂದ ೧೨ ಜನ ಅಫೀದ್ನನ್ನು ವಿವಸ್ತçಗೊಳಿಸಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಹಿಂದೂ ಯುವತಿಯರೊಂದಿಗೆ ಸ್ನೇಹ ಮಾಡ ಬೇಡ ಎಂದು ಬೆದರಿಸಿ ಮೊಬೈಲ್ ಹಾಗೂ ಪರ್ಸ್ ದೋಚಿದ್ದಾರೆ. ದಾಳಿಕೋರರಲ್ಲಿ ಕೆಲವರು ‘ಎಸ್ಎಸ್ಎಸ್ಪಿಯು' ಎಂಬ ಕಾಲೇಜು ಹೆಸರಿನ ಟೀ ಶರ್ಟ್ಗಳನ್ನು ಧರಿಸಿದ್ದರು. ಯುವಕನ ದೂರಿನ ಆಧಾರದ ಮೇಲೆ ಜಿಲ್ಲಾ ಪೊಲೀಸರು ದಾಳಿಕೋರರ ವಿರುದ್ಧ ಕೊಲೆ ಯತ್ನದ ಕೇಸ್ ದಾಖಲಿಸಿದ್ದಾರೆ. ಅಪ್ರಾಪ್ತ ಬಾಲಕಿಯ ತಂದೆ ಸಹ ಯುವಕನ ವಿರುದ್ಧ ದೂರು ನೀಡಿದ್ದು, ಅಫಿದ್ ತನ್ನ ಮಗಳಿಗೆ ಸಂಬAಧ ಬೆಳೆಸುವಂತೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಅಫಿದ್ ವಿರುದ್ಧ ಈಗ ಪೋಕ್ಸೊ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಎಎಪಿ-ಬಿಜೆಪಿ ಘರ್ಷಣೆ ನಂತರ ಸದನ ಮುಂದೂಡಿಕೆ
ನವದೆಹಲಿ, ಜ. ೬: ದೆಹಲಿ ಮಹಾನಗರ ಪಾಲಿಕೆಯಲ್ಲಿ ಎಎಪಿ ಮತ್ತು ಬಿಜೆಪಿ ನಡುವೆ ಜಟಾಪಟಿಯ ನಂತರ ಹೊಸದಾಗಿ ಚುನಾಯಿತವಾದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ನ ಚೊಚ್ಚಲ ಸಭೆಯು ಮೇಯರ್ ಮತ್ತು ಉಪಮೇಯರ್ ಅನ್ನು ಆಯ್ಕೆ ಮಾಡದೆಯೇ ಮುಂದೂಡಿಕೆಯಾಗಿದೆ. ಎಂಸಿಡಿ ಸದನ ಸಭೆಯನ್ನು ದಿನದ ಮಟ್ಟಿಗೆ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಮೇಯರ್ ಚುನಾವಣಾ ಪ್ರಕ್ರಿಯೆ ಮೇಲ್ವಿಚಾರಣೆ ವಹಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಕೌನ್ಸಿಲರ್ ಸತ್ಯ ಶರ್ಮಾ ತಿಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ತಾತ್ಕಾಲಿಕವಾಗಿ ಬಿಜೆಪಿಯ ಸತ್ಯಾ ಶರ್ಮಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ಶರ್ಮಾ ಅವರು ೧೦ ಮಂದಿ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸುವ ಪ್ರಕ್ರಿಯೆಯನ್ನು ಆರಂಭಿಸಿದಾಗ ಎಎಪಿ ಕೌನ್ಸಿಲರ್ಗಳು ಮತ್ತು ಶಾಸಕರು ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಮೊದಲು ಪ್ರಮಾಣ ವಚನ ಬೋಧಿಸುವಂತೆ ಒತ್ತಾಯಿಸಿದರು. ಈ ವೇಳೆ ಬಿಜೆಪಿ ಮತ್ತು ಆಪ್ ಸದಸ್ಯರ ನಡವೆ ಜಟಾಪಟಿ ಆರಂಭವಾಯಿತು. ದೆಹಲಿ ಮಹಾನಗರ ಪಾಲಿಕೆ ಸದಸ್ಯರ ಕಚ್ಚಾಟದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಶೆಲ್ಲಿ ಒಬೆರಾಯ್ ಮೇಯರ್ ಮತ್ತು ಮಹಮ್ಮದ್ ಇಕ್ಬಾಲ್ ಉಪಮೇಯರ್ ಸ್ಥಾನಕ್ಕೆ ಎಎಪಿ ಅಭ್ಯರ್ಥಿಗಳಾಗಿದ್ದು, ಶೆಲ್ಲಿ ಪೂರ್ವ ಪಟೇಲ್ ನಗರ ವಾರ್ಡ್ನಿಂದ ಮೊದಲ ಸಲ ಆಯ್ಕೆಯಾಗಿದ್ದಾರೆ. ಇಕ್ಬಾಲ್ ಚಾಂದಿನಿ ಮಹಲ್ ವಾರ್ಡ್ನಿಂದ ಎರಡನೆ ಸಲ ಜಯಶೀಲರಾಗಿದ್ದಾರೆ.
ಕೋವಿಡ್-೧೯ ಬಿಕ್ಕಟ್ಟು: ಆತಂಕವನ್ನು ಹೆಚ್ಚಿಸುತ್ತಿದೆ
ಬೀಜಿಂಗ್, ಜ. ೬: ಚೀನಾದಲ್ಲಿ ಕೋವಿಡ್ನ ಸೋಂಕು ಮತ್ತಷ್ಟು ಆತಂಕ ಮೂಡಿಸುತ್ತಿದೆ. ಸೋಂಕಿತರ ಸಂಖ್ಯೆ ನಿಖರವಾಗಿ ಚೀನಾದಲ್ಲಿ ಕೋವಿಡ್ನಿಂದಾಗಿ ಖ್ಯಾತ ನಾಮರು, ಸಾರ್ವಜನಿಕ ವಲಯದಲ್ಲಿ ಜನಪ್ರಿಯತೆ ಗಳಿಸಿರುವ ಮಂದಿ ಸಾವನ್ನಪ್ಪುತ್ತಿರುವುದು ಆತಂಕವನ್ನು ಎತ್ತರಕ್ಕೆ ಕೊಂಡೊಯ್ದಿದೆ. ೪೦ ವರ್ಷದ ಒಪೇರಾ ಹಾಡುಗಾರ ಚು ಲನ್ಲನ್ ಸಾವನ್ನಪ್ಪಿದ್ದು, ಹಲವರಿಗೆ ಇದು ಆಘಾತ ಉಂಟುಮಾಡಿದೆ ಎಂದು ಬಿಬಿಸಿ ವರದಿ ಪ್ರಕಟಿಸಿದೆ. ಕುಟುಂಬದವರು ಸಾವಿಗೆ ಕಾರಣವನ್ನು ಈವರೆಗೂ ಬಹಿರಂಗಪಡಿಸಿಲ್ಲ. ಕೋವಿಡ್ ಸೋಂಕು ವಿಪರೀತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚೀನಾ ಡಿಸೆಂಬರ್ನಲ್ಲಿ ತನ್ನ ಶೂನ್ಯ ಕೋವಿಡ್ ನೀತಿಯನ್ನು ವಾಪಸ್ ಪಡೆದಿದೆ. ಕೋವಿಡ್ ಸೋಂಕು ಹೆಚ್ಚುತ್ತಿರುವುದರ ಪರಿಣಾಮ ಚೀನಾದಲ್ಲಿ ಆಸ್ಪತ್ರೆಗಳು ಹಾಗೂ ಚಿತಾಗಾರಗಳು ತುಂಬಿ ತುಳುಕುತ್ತಿವೆ. ಕೋವಿಡ್ ನಿರ್ವಹಣೆಯಲ್ಲಿ ಚೀನಾದ ಆರೋಗ್ಯ ವ್ಯವಸ್ಥೆ ಕುಸಿಯುತ್ತಿದ್ದು, ಅಲ್ಲಿ ಕೋವಿಡ್ನ ದಿನನಿತ್ಯದ ಸೋಂಕು ಪತ್ತೆ ಸಂಖ್ಯೆಯ ಪ್ರಕಟಣೆಯನ್ನೂ ನಿಲ್ಲಿಸಲಾಗಿದೆ. ಬುಧವಾರದಂದು ವಿಶ್ವಸಂಸ್ಥೆ ಚೀನಾ ದೇಶವನ್ನು ಕೋವಿಡ್ನ ನೈಜ ಪರಿಣಾಮವನ್ನು ಮರೆಮಾಚುತ್ತಿದ್ದು, ಸಾವಿನ ವಿಷಯದಲ್ಲಿ ನಿರ್ದಿಷ್ಟವಾಗಿ ಮುಚ್ಚಿಡುತ್ತಿದೆ ಎಂದು ಎಚ್ಚರಿಸಿತ್ತು. ಡಿಸೆಂಬರ್ ೨೧ ರಿಂದ ೨೬ ವರೆಗೂ ಚೀನಾದಲ್ಲಿ ಉನ್ನತ ವಿಜ್ಞಾನ ಮತ್ತು ಇಂಜಿನಿಯರಿAಗ್ ಅಕಾಡೆಮಿಗಳ ಹಿನ್ನೆಲೆ ಹೊಂದಿದ ೧೬ ಮಂದಿ ಉನ್ನತ ವಿಜ್ಞಾನಿಗಳು ಸಾವನ್ನಪ್ಪಿದ್ದಾರೆ. ಆದರೆ ಈ ಪೈಕಿ ಯಾರೊಬ್ಬರ ಸಾವೂ ಕೋವಿಡ್ನೊಂದಿಗೆ ಸಂಬAಧಿಸಿಲ್ಲ ಎಂದು ಹೇಳಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.