ಮಡಿಕೇರಿ, ಜ. ೬: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಂಡು ಅರ್ಹ ನಾಗರಿಕರನ್ನು ಮತ್ತು ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಲು ತಾ. ೯.೧೧.೨೦೨೨ ರಿಂದ ತಾ. ೮.೧೨.೨೨ ರವರೆಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸ್ವೀಕರಿಸಲಾಗಿದ್ದು, ತಾ. ೧೨.೧೧.೨೦೨೨, ೨೦.೧೧.೨೦೨೨ ಮತ್ತು ತಾ. ೩.೧೨.೨೦೨೨ ಮತ್ತು ೪.೧೨.೨೦೨೨ ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ತಾ. ೫.೧.೨೦೨೩ ರಂದು ಎಲ್ಲಾ ಮತಗಟ್ಟೆಗಳಲ್ಲಿ, ತಹಶೀಲ್ದಾರರ, ಉಪವಿಭಾಗಾಧಿಕಾರಿಯವರ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಜಿಲ್ಲೆಯ ಅಧಿಕೃತ ವೆಬ್ಸೈಟ್ hಣಣಠಿs://ಞoಜಚಿgu.ಟಿiಛಿ.iಟಿ ರಲ್ಲಿ ಪ್ರಕಟಿಸಲಾಗಿದೆ.(ಮೊದಲ ಪುಟದಿಂದ) ಪ್ರಸ್ತುತ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು ೪,೪೪,೦೯೮ ಮತದಾರರು ಇದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೨೫,೯೧೦ ಮತದಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೧೮,೧೮೮ ಮತದಾರರು ಇದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಕಾಲೇಜುಗಳಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ, ೧೮-೧೯ ವರ್ಷದ ಒಟ್ಟು ೩೭೪೭ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲಾಗಿದೆ.
ಜಿಲ್ಲೆಯಲ್ಲಿರುವ ೨೫೦ ಹಾಡಿಗಳ ಪೈಕಿ ಜನವಸತಿ ಇರುವ ೭೬ ಹಾಡಿಗಳಲ್ಲಿ ವಾಸವಿರುವ ಜೇನುಕುರುಬ ಸಮುದಾಯ ಜನಾಂಗದವರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಸಹಯೋಗದೊಂದಿಗೆ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಿ, ತಂಡವು ಪ್ರತಿಯೊಂದು ಹಾಡಿಗಳಿಗೂ ಭೇಟಿ ನೀಡಿ, ಒಟ್ಟು ೧,೦೦೨ ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲಾಗಿದೆ.
ಮತದಾರರ ಪಟ್ಟಿಗೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ ಮತದಾರರು hಣಣಠಿs://ತಿತಿತಿ.ಟಿvsಠಿ.iಟಿ, hಣಣಠಿs://voಣeಡಿಠಿoಡಿಣಚಿಟ.eಛಿi.gov.iಟಿ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಗಿಊಂ ಮೊಬೈಲ್ ಆ್ಯಪ್ ಮೂಲಕ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.