ಕೂಡಿಗೆ, ಜ. ೬: ಪಕ್ಷದ ಚಟುವಟಿಕೆಯನ್ನು ವಿಸ್ತರಿಸುವ ದಿಸೆಯಲ್ಲಿ ಮತ್ತು ಪಂಚಾಯಿತಿ ಹಾಗೂ ಬ್ಲಾಕ್ ಮಟ್ಟದ ಸಮಿತಿಗಳನ್ನು ಅತ್ಯಂತ ಹೆಚ್ಚು ಸಕ್ರಿಯಗೊಳಿಸಲು ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಕಾರ್ಯಕರ್ತರು ಮುಖ್ಯವಾಗಿರುತ್ತಾರೆ. ಅವರುಗಳ ಮೂಲಕ ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಎಲ್ಲರೂ ಮುಂದಾಗಬೇಕೆAದು ಕೂಡಿಗೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಡೆದ ಪಂಚಾಯಿತಿ ಮಟ್ಟದ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ವಹಿಸಿ ಕಾಂಗ್ರೆಸ್ ಪಕ್ಷವನ್ನು ಅಮೂಲಾಗ್ರವಾಗಿ ಸದೃಢಪಡಿಸುವ ಚಿಂತನೆಯ ಮೂಲಕ ಪಕ್ಷದ ಕಾರ್ಯಕರ್ತರು ಒಗ್ಗೂಡುವ ಮೂಲಕ ಮುಂದಿನ ವಿಧಾನಸಭೆಯ ಚುನಾವಣೆಯನ್ನು ಎದುರಿಸುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲಾ ಕಾರ್ಯಕರ್ತರು ಶ್ರಮ ವಹಿಸಬೇಕಾಗಿದೆ ಎಂದರು.

ವೇದಿಕೆಯಲ್ಲಿ ಮಾಜಿ ಸಚಿವ ಬಿ.ಎ. ಜೀವಿಜಯ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಕಾಂಗ್ರೆಸ್ ಮುಖಂಡರಾದ ಲೋಕೇಶ್, ಮಂಥರ್ ಗೌಡ, ಕುಶಾಲನಗರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಕಾಂಗ್ರೆಸ್ ಎಸ್‌ಟಿ ಘಟಕ ಅಧ್ಯಕ್ಷ ಎಸ್.ಎನ್. ರಾಜಾರಾವ್, ಉದ್ಯಮಿ ಹರಪಳ್ಳಿ ರವೀಂದ್ರ, ಕಾಂಗ್ರೆಸ್ ಪಕ್ಷದ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತ ನಾಡಿದರು.

ಈ ಸಂದರ್ಭ ಯುವ ಘಟಕದ ಅಧ್ಯಕ್ಷ ಮಿಥುನ್, ಹಿಂದುಳಿದ ಘಟಕದ ಅಧ್ಯಕ್ಷ ಎನ್. ಪೃಥ್ವಿ, ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಟಿ.ಪಿ. ಹಮೀದ್ ಸೇರಿದಂತೆ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಹಾಗೂ ಹೋಬಳಿ ಮಟ್ಟದ ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.

ಸಭೆಯಲ್ಲಿ ಕೂಡಿಗೆ ಮಾದಲಾಪುರ, ಹುದುಗೂರು, ಬ್ಯಾಡಗೊಟ್ಟ, ಕೂಡು ಮಂಗಳೂರು, ಸೀಗೆಹೊಸೂರು ಭಾಗಗಳಿಂದ ಕಾರ್ಯಕರ್ತರು ಹಾಜರಿದ್ದರು.