ಮುಳ್ಳೂರು, ಜ. ೭: ಶನಿವಾರಸಂತೆ ಕ್ಲಸ್ಟರ್ ವ್ಯಾಪ್ತಿಯ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಭೆ ಸಮೀಪದ ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಿತು.
ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಮಾತನಾಡಿ, ೫ನೇ ಮತ್ತು ೮ನೇ ತರಗತಿಗಳ ಪಬ್ಲಿಕ್ ಪರೀಕ್ಷೆಗಳಿಗೆ ಸಂಬAಧಪಟ್ಟAತೆ ಮತ್ತು ಇತರ ಶೈಕ್ಷಣಿಕ ವಿಷಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಸಭೆಯಲ್ಲಿ ಬಿಆರ್ಪಿ ಮಧು ಇತರ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.