ವೀರಾಜಪೇಟೆ, ಜ. ೬: ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರಗಳು ಪ್ರಮುಖ ಕೇಂದ್ರವಾಗಿ ಮುಂದುವರಿ ಯುತ್ತಿದ್ದು ಪುಟ್ಟ ಮಕ್ಕಳು ಮತ್ತು ಮಹಿಳೆಯರಿಗೆ ಅನುಕೂಲವಾಗುವಂತ ಸೌಲಭ್ಯಗಳನ್ನು ಕೇಂದ್ರ ಸರಕಾರ ನೀಡುತ್ತಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟೋಳಿ ಪ, ಜಾತಿ ಕಾಲೋನಿಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ ಮತ್ತು ಗರ್ಭಿಣಿಯರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪುಟ್ಟ ಮಕ್ಕಳಿಗೆ ಹಾಗೂ ಗರ್ಬಿಣಿಯರು ಮತ್ತು ಬಾಣಂತಿಯರಿಗೆ ಉತ್ತಮ ಆರೋಗ್ಯದ ದೃಷ್ಟಿಯಿಂದ ವಿಶ್ವ ಆರೋಗ್ಯ ಸಂಸ್ಥೆಯು (ಸಿರಿಧಾನ್ಯ) ಯುಗಳಧಾನ್ಯಗಳನ್ನು ನೀಡುತ್ತಿದ್ದು, ಬಡ ಕುಟುಂಬದ ಪುಟ್ಟ ಮಕ್ಕಳು ಮತ್ತು ಮಹಿಳೆಯರು ಪಡೆದುಕೊಳ್ಳುವಂತಾಗಬೇಕು. ಈ ಗ್ರಾಮದಲ್ಲಿ ತೆರೆದಿರುವ ಅಂಗನವಾಡಿ ಕೇಂದ್ರ ಮತ್ತೊಬ್ಬರ ಕಟ್ಟಡದಲ್ಲಿದ್ದು ಸರಕಾರ ಈಗಾಗಲೇ ಆರು ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡಿದ್ದು, ಮುಂದಿನ ದಿನದಲ್ಲಿ ಸರಕಾರಿ ಜಾಗ ಗುರುತು ಮಾಡಿ ನೂತನ ಅಂಗನವಾಡಿ ಕೇಂದ್ರವನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೋಪಯ್ಯ ಅವರು ಇದುವರೆಗೂ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರದಾರರಿಗೆ ಉಚಿತ ೫ ಕೆ.ಜಿ. ಅಕ್ಕಿ ಕೊಡುತ್ತಿದ್ದು ಈಗ ಸರಕಾರ ೬ ಕೆ.ಜಿ. ಅಕ್ಕಿ ಕೊಡಲು ತೀರ್ಮಾನಿಸಿರುವುದಾಗಿ ತಿಳಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆಯ ಜಿಲ್ಲಾ ಸಂಚಾಲಕ ಹೆಚ್.ಆರ್. ಶಿವಣ್ಣ ಮಾತನಾಡಿ ಕೊಟ್ಟೋಳಿ ಪ, ಜಾತಿ ಕಾಲೋನಿಯಲ್ಲಿ ಸಭೆ ಸಮಾರಂಭ ಕಾರ್ಯಗಳನ್ನು ನಡೆಸಲು ಸಭಾಂಗಣ ಇಲ್ಲ. ಆದರಿಂದ ಶಾಸಕರು ಅಂಬೇಡ್ಕರ್ ಭವನಕ್ಕೆ ಅನುದಾನ ಮತ್ತು ಸರಕಾರಿ ಜಾಗದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಿ ಕೊಡುವಂತೆ ಮನವಿ ಮಾಡಿದರು. ಇದಕ್ಕೆ ಶಾಸಕ ಬೋಪಯ್ಯ ಅವರು ಮಾತನಾಡಿ ಜಾಗದ ಸಮಸ್ಯೆ ಇದ್ದು ಈ ಸಂಬAಧ ಜಿಲ್ಲಾಧಿಕಾರಿ ಗಳೊಂದಿಗೆ ಮಾತನಾಡಿ ಬಗೆಹರಿಸುವುದಾಗಿ ತಿಳಿಸಿದರು.

ಶಿಶು ಅಭಿವೃದ್ಧಿ ಯೊಜನಾಧಿಕಾರಿ ರಾಜೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಈಗಾಗಲೇ ಪೊನ್ನಂಪೇಟೆ-ವೀರಾಜಪೇಟೆ ತಾಲೂಕಿನಲ್ಲಿ ೩೩೫ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸರಕಾರ ೬ ನೂತನ ಅಂಗನವಾಡಿ ಕೇಂದ್ರಗಳಿಗೆ ಮಂಜೂರಾತಿ ನೀಡಿದೆ. ಇದರಿಂದ ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದಂತಾಗಿದ್ದು ಅಂಗನವಾಡಿಯಲ್ಲಿ ಉತ್ತಮ ಆರೋಗ್ಯಕ್ಕೆ ಪೌಷ್ಠಿಕ ಆಹಾರ ದೊರಕುತ್ತಿರುವುದನ್ನು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದರು.

ಅಂಗನವಾಡಿ ಕೇಂದ್ರ ಉದ್ಘಾಟನೆ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಪಿ. ರಘು ನಾಣಯ್ಯ, ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೀಲಾ ಮೇದಪ್ಪ, ಉಪಾಧ್ಯಕ್ಷೆ ಮೀನಾಕ್ಷಿ, ಸದಸ್ಯರುಗಳಾದ ಪರಮೇಶ್ವರ, ರಾಮಯ್ಯ, ಇಸ್ಮಾಯಿಲ್, ಎಂ. ಪ್ರಶಾಂತ್ ಉತ್ತಪ್ಪ, ವಿಮಲ, ವನಿತಾ, ಜಫ್ರಿ ಉತ್ತಪ್ಪ, ಪಿ.ಡಿ.ಓ. ಪ್ರಮೋದ್, ಕಾರ್ಯದರ್ಶಿ ಸತೀಶ್, ಮಾಜಿ ಸದಸ್ಯ ಚೋಟು ಬಿದ್ದಪ್ಪ, ಗ್ರಾಮದ ಹಿರಿಯರಾದ ಕುಂಬೆಯAಡ ಗಣೇಶ್, ಕುವಲೇರ ಉಮ್ಮರ್, ಸಿ.ರತ್ನ ಅಯ್ಯಣ್ಣ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಉಪಾಧ್ಯಕ್ಷ ಗೋಪಾಲ, ತಾಲೂಕು ಸಂಚಾಲಕ ಲವ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.