ಸೋಮವಾರಪೇಟೆ, ಜ. ೬: ಇಲ್ಲಿನ ಪಟ್ಟಣ ಪಂಚಾಯಿತಿಯ ೨೦೨೩-೨೪ನೇ ಸಾಲಿನ ಆಯ -ವ್ಯಯ ಪೂರ್ವಭಾವಿ ಸಭೆ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಪಿ.ಕೆ. ಚಂದ್ರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಪಟ್ಟಣದಲ್ಲಿ ಆಗ ಬೇಕಾಗಿರುವ ಅಭಿವೃದ್ಧಿ ಕಾಮ ಗಾರಿಗಳ ಬಗ್ಗೆ ಸಲಹೆ ನೀಡಿದರು. ಲಯನ್ಸ್ ಕ್ಲಬ್ ವತಿಯಿಂದ ಕರ್ಕಳ್ಳಿ ಬಾಣೆಯ ರುದ್ರಭೂಮಿಯಲ್ಲಿ ಸಿಲಿಕಾನ್ ಚೇಂಬರ್ ಅಳವಡಿಸಿದ್ದು, ಪಂಚಾಯಿತಿ ವತಿಯಿಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಕ್ಲಬ್ ಅಧ್ಯಕ್ಷ ರೋಹಿತ್ ಮನವಿ ಮಾಡಿದರು.

ಈಗಾಗಲೇ ಕೊಳವೆಬಾವಿ ಕೊರೆಸಲಾಗಿದೆ. ಸುತ್ತಲೂ ಕಾಂಪೌAಡ್ ನಿರ್ಮಿಸಿ, ಉತ್ತಮವಾದ ರಸ್ತೆ ಹಾಗೂ ಪಾರ್ಕ್ ನಿರ್ಮಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ ಎಂದು ಅಧ್ಯಕ್ಷ ಪಿ.ಕೆ. ಚಂದ್ರು ಹೇಳಿದರು.

ಪಟ್ಟಣದ ಎಂ.ಜಿ. ರಸ್ತೆ, ತ್ಯಾಗರಾಜ ರಸ್ತೆ ಸೇರಿದಂತೆ ಅನೇಕ ಕಡೆ ಬೀದಿದೀಪ ಅಳವಡಿಕೆ ಯಾಗಬೇಕಾಗಿದೆ ಎಂದು ಲಯನ್ಸ್ ಕಾರ್ಯದರ್ಶಿ ಕೆ.ಎನ್. ತೇಜಸ್ವಿ ಹೇಳಿದರು. ಗುಣಮಟ್ಟದ ಬೀದಿ ದೀಪ ಅಳವಡಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಾಧಿಕಾರಿ ನಾಚಪ್ಪ ತಿಳಿಸಿದರು.

ಆನೆಕೆರೆಗೆ ನಿರ್ಮಿಸಿರುವ ಹಳೆ ಕಾಂಪೌAಡ್ ಶಿಥಿಲಾವಸ್ಥೆಗೆ ತಲುಪಿದೆ. ಕೆರೆಯ ಆವರಣ ಮದ್ಯಪಾನಿಗಳ ಅಡ್ಡೆಯಾಗಿದೆ.

ಕಾಂಪೌAಡ್ ಬದಲಿಗೆ ಮೆಸ್ ಅಳವಡಿಕೆ ಮಾಡಬೇಕು ಎಂದು ಜಯಕರ್ನಾಟಕ ಸಂಘಟನೆಯ ಪಂಚಾಯಿತಿ ಮೇಲ್ದರ್ಜೆಗೇರಿಸಿದರೆ ಮಾತ್ರ ಅಭಿವೃದ್ಧಿ ಕಾಣಬಹುದು. ಪಕ್ಕದ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಸೇರಿಸಿಕೊಂಡು ಪುರಸಭೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಡಿ.ಟಿ. ರಾಜೇಶ್ ಒತ್ತಾಯಿಸಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಂಖ್ಯೆ ಕಡಿಮೆಯಿದೆ. ಪಕ್ಕದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಭೂಮಿ ಜಾಸ್ತಿಯಿದೆ. ಒಂದಷ್ಟು ತಾಂತ್ರಿಕ ಸಮಸ್ಯೆಗಳಿವೆ. ಆದರೂ ಶ್ರಮ ಪಡುತ್ತಿದ್ದೇವೆ ಎಂದು ಮುಖ್ಯಾಧಿಕಾರಿ ನಾಚಪ್ಪ ಹೇಳಿದರು.

ಪಟ್ಟಣದಲ್ಲಿನ ಕಸ ಸಮಸ್ಯೆಯ ಬಗ್ಗೆ ಹೆಚ್.ಎ. ನಾಗರಾಜ್ ಗಮನ ಸೆಳೆದರು. ಪಟ್ಟಣದ ಪ್ರವೇಶದ್ವಾರದಲ್ಲಿ ಸ್ವಾಗತ ಕಮಾನು ಅಳವಡಿಸುವಂತೆ ಅಭಿಷೇಕ್ ಹೇಳಿದರು.

ಸಾರ್ವಜನಿಕರ ಸಲಹೆಗಳನ್ನು ಬಜೆಟ್‌ನಲ್ಲಿ ಪರಿಗಣಿಸಲಾಗುವುದು ಎಂದು ಅಧ್ಯಕ್ಷರು ಭರವಸೆ ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷ ಬಿ. ಸಂಜೀವ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.