ಮಡಿಕೇರಿ, ಜ. ೮: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಚೆರಿಯಮನೆ ಭಾರ್ಗವ ಅವರು ನೇಮಕಗೊಂಡಿದ್ದಾರೆ.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ರಾಜ್ಯಾಧ್ಯಕ್ಷರಾದ ಸಿ. ನಾರಾಯಣ ಸ್ವಾಮಿ, ಸಂಚಾಲಕರಾದ ವಿಜಯ ಸಿಂಗ್ ಅವರ ನಿರ್ದೇಶನದ ಮೇರೆಗೆ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧÀರ್ಮಜ ಉತ್ತಪ್ಪ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಚ್.ಎ. ಹಂಸ ಅವರ ಶಿಫಾರಸ್ಸಿನ ಮೇರೆಗೆ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಅವರು ನೇಮಕಗೊಳಿಸಿದ್ದಾರೆ.

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಧರ್ಮಜ ಉತ್ತಪ್ಪ ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪಂಚಾಯತ್ ವ್ಯವಸ್ಥೆಗೆ ತಿದ್ದುಪಡಿ ತಂದು ದೇಶದ ಅಮೂಲಾಗ್ರ ಬದಲಾವಣೆಗೆ ಕಾರಣರಾದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಘಟಕರು ಪಂಚಾಯತ್ ವ್ಯವಸ್ಥೆಯಲ್ಲಿ ಹಾಲಿ, ಮಾಜಿ ಸದಸ್ಯರುಗಳ ಮನವೊಲಿಕೆ ಮೂಲಕ ಪಕ್ಷದ ಬೆಳವಣಿಗೆಗೆ ಅವರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕರೆ ನೀಡಿದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನ, ಡಿಸಿಸಿ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಡಿಸಿಸಿ ಸದಸ್ಯ ಟಿ.ಪಿ. ನಾಣಯ್ಯ, ನಾಪೋಕ್ಲು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಕೆ.ಎಂ. ಬಷೀರ್, ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಮಂಡಿರ ಸದಾ ಮುದ್ದಪ್ಪ, ಮರಗೋಡು ವಲಯ ಕಾಂಗ್ರೆಸ್ ಅಧ್ಯಕ್ಷ ವಿವೇಕಾನಂದ, ಎಂ.ಜಿ. ನಾಗೇಶ್ ನೇಮಕಾತಿ ಆದೇಶ ನೀಡುವಾಗ ಹಾಜರಿದ್ದರು.