ಹಾವೇರಿ, ಜ. ೮: ಹಾವೇರಿಯಲ್ಲಿ ನಡೆಯುತ್ತಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಗಿನ ಚುಟುಕು ಕವಿ ಹಾ.ತಿ. ಜಯಪ್ರಕಾಶ್ ಕೊಡಗಿನ ಕುರಿತು ಕವನ ವಾಚನ ಮಾಡಿ ಕೊಡಗಿನ ಜೇನು ಕವಿಗೋಷ್ಠಿ ಅಧ್ಯಕ್ಷರಿಗೆ ಉಡುಗೊರೆ ನೀಡಿ ಗೋಷ್ಠಿಯ ಸವಿ ಹೆಚ್ಚಿಸಿದರು.

ಕನಕ- ಷರೀಫ- ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ನಡೆದ ಸಾಧಕರಿಗೆÀ ಸನ್ಮಾನ ಕಾರ್ಯಕ್ರಮದಲ್ಲಿ ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪುತ್ರರಾದ ನಿವೃತ್ತ ಏರ್ ಮಾರ್ಷಲ್ ಕೆ.ಸಿ. ಕಾರ್ಯಪ್ಪ ಅವರಿಗೆ ರಕ್ಷಣಾ ಕ್ಷೇತ್ರದಲ್ಲಿ ದೇಶ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.

ಕೊಡಗು ಜಿಲ್ಲೆಯಿಂದ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ನೇತೃತ್ವದಲ್ಲಿ ಮಡಿಕೇರಿ ತಾಲೂಕು ಅಧ್ಯಕ್ಷ ಅಂಬೆಕಲ್ ನವೀನ್, ಸೋಮವಾರಪೇಟೆ ಅಧ್ಯಕ್ಷ ಎಸ್.ಡಿ.ವಿಜೇತ್, ಕುಶಾಲನಗರ ಅಧ್ಯಕ್ಷ ಕೆ.ಎಸ್ ಮೂರ್ತಿ ಮುಂದಾಳತ್ವದಲ್ಲಿ ಜಿಲ್ಲೆಯ ಐವತ್ತಕ್ಕೂ ಹೆಚ್ಚು ಕಸಾಪ ಸದಸ್ಯರು ಭಾಗವಹಿಸಿದ್ದರು.