ಚೆಯ್ಯಂಡಾಣೆ, ಜ. ೮: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಒಂದರಿAದ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿರುವ ಶೀಲಾ ರವೀಂದ್ರ ಹಾಗೂ ಪುತ್ರಿ ತನುಷ ರವೀಂದ್ರ ಅವರುಗಳು ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿ ವಿತರಿಸಿದರು. ಈ ಸಂದರ್ಭ ಮುಖ್ಯ ಶಿಕ್ಷಕಿ ಮೀನಾ ಹಾಗೂ ಶಿಕ್ಷಕ ವೃಂದವರು ಉಪಸ್ಥಿತರಿದ್ದರು.

* ಚೇಲಾವರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿರುವ ತನುಷ ರವೀಂದ್ರ ಅವರು ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭ ಶಾಲೆಯ ಅತಿಥಿ ಶಿಕ್ಷಕಿ ದೀಪಿಕಾ ಉಪಸ್ಥಿತರಿದ್ದರು.