ಸಿದ್ದಾಪುರ, ಜ. ೮ ಹಿಂದುಳಿದ ವರ್ಗದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಗುಡ್ಡೆಹೊಸೂರುವಿನಲ್ಲಿ ಎಸ್.ಎನ್.ಡಿ.ಪಿ ಜಿಲ್ಲಾ ಯೂನಿಯನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಯೂನಿಯನ್ ಅಧ್ಯಕ್ಷ ವಿ.ಕೆ ಲೋಕೇಶ್ ರಾಜ್ಯ ಸರ್ಕಾರವು ಇತ್ತೀಚೆಗೆ ಹಿಂದುಳಿದ ವರ್ಗದ ಕ್ಷೇಮಾಭಿವೃದ್ಧಿಗಾಗಿ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಮಂಡಳಿ ಸ್ಥಾಪನೆ ಮಾಡಿರುವುದು ಉತ್ತಮ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ಹಾಗೂ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗದ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿರವರ ಪ್ರಯತ್ನದಿಂದ ಗುರುಗಳ ಹೆಸರಿನಲ್ಲಿ ನಿಗಮ ಮಂಡಳಿ ಸ್ಥಾಪನೆ ಮಾಡಿರುವುದರಿಂದ ಕೆಳ ವರ್ಗದ ಮಂದಿಯ ಅಭಿವೃದ್ಧಿಗೆ ಸಹಕಾರಿ ಆಗಲಿದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ನೆಲ್ಯಹುದಿಕೇರಿ ಎಸ್.ಎನ್.ಡಿ.ಪಿ. ಶಾಖಾ ಅಧ್ಯಕ್ಷ ಸಂದೀಪ್ ಕುಮಾರ್, ಕುಶಾಲನಗರ ಶಾಖಾ ಅಧ್ಯಕ್ಷ ಗಣೇಶ್, ಕಾರ್ಯದರ್ಶಿ ರಾಜೇಶ್, ಪ್ರವೀಣ್, ಎಂ.ಎ. ಆನಂದ ಹಾಜರಿದ್ದರು.