ಮಡಿಕೇರಿ, ಜ. ೮: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಒದಗಿಸಿದ ಪೂರಕ ಆಯವ್ಯಯದ ಅನುದಾನದಲ್ಲಿ ಡಿ. ದೇರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಈ ಯೋಜನೆಯ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ರೂ. ೨ ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಠ ಶೇ. ೧೫ ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. ೪ ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮ ಸಾವಿರಗಳು, ಪಟ್ಟಣ ಪ್ರದೇಶದವರಿಗೆ ರೂ. ೧,೨೦,೦೦೦ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾAಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವೂ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.
ಗAಗಾ ಕಲ್ಯಾಣ ನೀರಾವರಿ ಯೋಜನೆಯಡಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಅರ್ಹತೆ ಹೊಂದಿರಬೇಕು.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿ, ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು, ಹಾಲಿ ಜಮೀನುಗಳು ಖುಷ್ಕಿಯಾಗಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೬೦ ವರ್ಷದ ಒಳಗಿರಬೇಕು. ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮ ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಒಳಗಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಕನಿಷ್ಠ ೧ ಎಕರೆ ಜಮೀನು ಹೊಂದಿರಬೇಕು. ವೈಯುಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ. ೨.೫೦ ಲಕ್ಷಗಳು. ಇದರಲ್ಲಿ ರೂ.೨ ಲಕ್ಷ ಸಹಾಯಧನ ಹಾಗೂ ರೂ.೫೦ ಸಾವಿರ ನಿಗದಿಂದ ಶೇ.೪ರ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ರೈತರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು. ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿಸಲ್ಲಿಸಲು ಅರ್ಹರಿರುವುದಿಲ್ಲ. ಈಗಾಗಲೇ ೨೦೨೨-೨೩ ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನ: ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ, ೧೭ ಕೊನೆಯ ದಿನವಾಗಿದೆ. ಹಾಗೂ ನಿಗಮದ ವೆಬ್ಸೈಟ್ hಣಣಠಿs://ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ನಿಗಮದ ಕೇಂದ್ರ ಕಚೇರಿ ದೂರವಾಣಿ, ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨ ಮತ್ತು ೮೦೫೦೭೭೦೦೦೪ ಮತ್ತು ೬, ೭೦೯೦೪೦೦೧೦೦, ೭೦೯೦೪೦೦೯೦೦ ಅಥವಾ ಕಚೇರಿ ವೇಳೆಯಲ್ಲಿ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮಡಿಕೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಕ್ರೀಡಾ ಪ್ರೋತ್ಸಾಹಧನಕ್ಕೆ
ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ನೀಡಲಾಗುವುದು.
ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು ೨೦೨೨ ರ ಜನವರಿ ೧ ರ ನಂತರ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟಿçÃಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾ ಪಂದ್ಯಾವಳಿಗಳಲ್ಲಿನ ೨೦೨೨ ರ ಜನವರಿ ೧ ರಿಂದ ಡಿಸೆಂಬರ್ ೩೧ ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.
ಅರ್ಜಿಯನ್ನು ಕ್ರೀಡಾ ಇಲಾಖೆಯಿಂದ ಪಡೆದು ೨೦೨೩ ರ ಜನವರಿ, ೨೫ ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೯೯೮೫ ಹಾಗೂ ೯೪೮೦೦೩೨೭೧೨ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.