ಸೋಮವಾರಪೇಟೆ, ಜ. ೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನವಜೀವನ ಸಮಿತಿ ಹಾಗೂ ಜೇಸೀ ಸಂಸ್ಥೆಯ ಸದಸ್ಯರೂ ಆಗಿರುವ ಅಬ್ಬೂರುಕಟ್ಟೆಯ ರವಿಕುಮಾರ್ ಅವರು ತಮ್ಮ ಹುಟ್ಟುಹಬ್ಬವನ್ನು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಊಟೋಪಚಾರ ವ್ಯವಸ್ಥೆ ಕಲ್ಪಿಸುವ ಮೂಲಕ ಆಚರಿಸಿಕೊಂಡರು.

ಈ ಸಂದರ್ಭ ಜೇಸೀ ಸದಸ್ಯ ರವಿಕುಮಾರ್, ಅಧ್ಯಕ್ಷೆ ಎಂ.ಎ. ರುಬೀನಾ, ನಿಕಟಪೂರ್ವ ಅಧ್ಯಕ್ಷ ಕೆ.ಎ. ಪ್ರಕಾಶ್, ಲೇಡಿ ಜೇಸಿ ಚೇರ್‌ಪರ್ಸನ್ ಪವಿತ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.