ಮುಳ್ಳೂರು, ಜ. ೮: ಸದೃಢತೆಯ ಮನಸು ಮತ್ತು ಆತ್ಮವಿಶ್ವಾಸ ಸಾಧನೆಯ ಊರುಗೋಲು ಎಂದು ಹಾಸನದ ವಿದ್ಯಾಸೌಧ ಪ.ಪೂ. ಕಾಲೇಜಿನ ಉಪನ್ಯಾಸಕಿ ವೀಣಾ ಮಂಜುನಾಥ್ ಅಭಿಪ್ರಾಯಪಟ್ಟರು. ಅವರು ಸಮೀಪದ ಬ್ಯಾಡಗೊಟ್ಟ ಗ್ರಾ.ಪಂ. ವ್ಯಾಪ್ತಿಯ ಕ್ಯಾತಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಡ್ಲಿಪೇಟೆ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು. ತನ್ನ ಮೇಲೆ ತಮಗೆ ನಂಬಿಕೆ, ವಿಶ್ವಾಸ ಇಲ್ಲದೆ ಹೋದರೆ ಯಾವುದೇ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಆತ್ಮವಿಸ್ವಾಸ, ಶಿಸ್ತು, ನಂಬಿಕೆ, ವ್ಯಕ್ತಿತ್ವ ವಿಕಸನ ಮುಂತಾದ ಬದುಕಿಗೆ ಬೇಕಾಗಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಶಿಬಿರವು ಉತ್ತಮ ವೇದಿಕೆಯಾಗುತ್ತದೆ. ಈ ನಿಟ್ಟಿನಲ್ಲಿ ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತ ಮೌಲ್ಯ ವಿಚಾರ ಧಾರೆಗಳನ್ನು ಸದ್ಬಳಕೆ ಮಾಡಿಕೊಂಡು ಅವುಗಳನ್ನು ತಮ್ಮಲ್ಲಿ ಅಳವಡಿಸಿ ಕೊಂಡರೆ ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು. ದೃಢವಾದ ಶರೀರಕ್ಕಿಂತ ಸದೃಢ ಮನಸ್ಸು ಮತ್ತು ವ್ಯಕ್ತಿತ್ವ ಮಿಗಿಲಾದದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೇವಲ ಸಿನಿಮಾ ಕ್ಷೇತ್ರದಲ್ಲಿ ಪ್ರಚಾರದಲ್ಲಿರುವ ಸೆಲೆಬ್ರೆಟಿಗಳನ್ನು ಆದರ್ಶ ವ್ಯಕ್ತಿಯಾಗಿ ಭಾವಿಸಬಾರದು. ರಾಷ್ಟçಕ್ಕೆ, ವಿದ್ಯಾರ್ಥಿ ಸಮೂಹ, ವಿಜ್ಞಾನ ಕ್ಷೇತ್ರ ಸಮಾಜಕ್ಕೆ ಕೊಡುಗೆಯನ್ನು ನೀಡಿದ ಮತ್ತು ಸಾಧನೆ ಮಾಡಿದ ಮಾಜಿ ರಾಷ್ಟçಪತಿ ವಿಜ್ಞಾನಿ ಡಾ. ಅಬ್ದುಲ್ ಕಲಾಂ ಅವರಂತಹ ಮಹಾನ್ ಸಾಧಕರನ್ನು ಆದರ್ಶ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕೊಡ್ಲಿಪೇಟೆ ಪ.ಪೂ. ಕಾಲೇಜಿನ ಪ್ರಾಂಶುಪಾಲ ಜಗದೀಶ್ ಬಾಬು ಮಾತನಾಡಿ, ವಿದ್ಯಾರ್ಥಿಗಳು ಮತ್ತು ವಿದ್ಯಾವಂತರು ಸ್ವಾರ್ಥಿಯಾಗದೆ ಸಮಾಜಕ್ಕೆ ಬೆಳಕಾಗಬೇಕು, ಶಿಕ್ಷಣವನ್ನು ವೈಯಕ್ತಿಕ ಬದುಕಿನ ವಿಚಾರಕ್ಕಾಗಿ ಮಾತ್ರ ಸದ್ಬಳಕೆ ಮಾಡಿಕೊಳ್ಳಬಾರದು. ಸಮಾಜ ಮತ್ತು ರಾಷ್ಟçದ ಅಭಿವೃದ್ಧಿಗಾಗಿ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇವುಗಳನ್ನು ಕಲಿತುಕೊಳ್ಳಲು ರಾಷ್ಟಿçÃಯ ಸೇವಾ ಶಿಬಿರಗಳ ಪಾಲ್ಗೊಳ್ಳುವಿಕೆಯಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.

ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್ ಮಾತನಾಡಿ, ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳ ಜೊತೆಯಲ್ಲಿ ಕಾಲೇಜುಗಳಲ್ಲಿ ಸ್ಥಾಪಿತವಾಗಿರುವ ಎನ್‌ಎಸ್‌ಎಸ್ ಘಟಕ, ಕಲಾ, ವಾಣಿಜ್ಯ ಇನ್ನು ಮುಂತಾದ ಘಟಕ ಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿ ಕೊಳ್ಳುವುದರಿಂದ ಬೌದ್ಧಿಕ ವ್ಯಕ್ತಿತ್ವಮಟ್ಟ ಅಭಿವೃದ್ಧಿಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಸಿ.ವಿ. ಶಂಭುಲಿAಗಪ್ಪ, ಗೌರವ ಕಾರ್ಯದರ್ಶಿ ಕೆ.ಎಂ. ಪರಮೇಶ್, ಬ್ಯಾಡಗೊಟ್ಟ ಗ್ರಾ.ಪಂ. ಸದಸ್ಯೆ ದಾಕ್ಷಾಯಿಣಿ, ಮಾಜಿ ಅಧ್ಯಕ್ಷ ಕೆ.ಎಂ. ಗಣೇಶ್ ಮಾತನಾಡಿದರು. ಸಮಾರಂಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎ.ಪಿ. ರಾಧ, ಎನ್‌ಎಸ್‌ಎಸ್ ಯೋಜನಾಧಿಕಾರಿ ಕೆ.ಹೆಚ್. ಯೋಗೇಂದ್ರ, ಉಪನ್ಯಾಸಕ ಅಭಿಷೇಕ್ ಇನ್ನು ಮುಂತಾದವರು ಉಪಸ್ಥಿತರಿದ್ದರು.