ಕುಶಾಲನಗರ, ಜ. ೮: ಬಿಜೆಪಿ ಪಕ್ಷದ ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಸೋಮವಾರಪೇಟೆ ಮಂಡಲದ ಬಸವನತ್ತೂರು ಬೂತ್ ಸಂಖ್ಯೆ ೧೪೬ ರಲ್ಲಿ ಬೂತ್ ವಿಜಯ ಅಭಿಯಾನದ ಅಂಗವಾಗಿ ಕಾರ್ಯರ್ತರ ಸಭೆ ನಡೆಯಿತು. ಬೂತ್ ಅಧ್ಯಕ್ಷ ಆರ್.ಕೆ. ಕೃಷ್ಣ ಅಧ್ಯಕ್ಷತೆಯಲ್ಲಿ ಶಕ್ತಿ ಕೇಂದ್ರದ ಪ್ರಮುಖ ಪ್ರವೀಣ್ ನಿವಾಸದಲ್ಲಿ ಸಭೆ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಬೂತ್ ಸಶಕ್ತಿಕರಣದ ಬಗ್ಗೆ ಮಾಹಿತಿ ನೀಡಿದರು.
ಬೂತ್ ರಚನೆ, ರಚಿಸಿರುವ ಬೂತ್ ಪರಿಶೀಲನೆ, ಪೇಜ್ ರಚನೆ, ಪೇಜ್ ಪ್ರಮುಖ ನೇಮಕ, ವಾಟ್ಸಾಪ್ ಗ್ರೂಪ್ ರಚನೆ, ಮನೆ ಮೇಲೆ ಬಿಜೆಪಿ ಧ್ವಜಾರೋಹಣ, ಮನ್ ಕಿ ಬಾತ್ ವೀಕ್ಷಣೆ, ಫಲಾನುಭವಿಗಳ ಪಟ್ಟಿ ರಚನೆ, ಬಿಜೆಪಿ ಸರಕಾರದ ಸಾಧನೆಗಳ ಬಗ್ಗೆ ಕರಪತ್ರ ಪ್ರಚಾರ ಕಾರ್ಯ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಉಪಸ್ಥಿತರಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ತಾ. ೨ಕ್ಕೆ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ತಾ. ೧೨ ರವರೆಗೆ ಮುಂದುವರೆ ಯಲಿದೆ ಎಂದರು. ಮುಂಬರುವ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಪಕ್ಷದ ಕಾರ್ಯ ಕರ್ತರು ಕಾರ್ಯೋನ್ಮುಖರಾಗುವಂತೆ ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಬಿಜೆಪಿ ಪಕ್ಷದ ಕಾರ್ಯ ಯೋಜನೆ, ಸಾಧನೆಗಳ ಬಗ್ಗೆ ತಿಳಿಸಿದರು. ಬೂತ್ ವಿಜಯ ಅಭಿಯಾನದ ಪ್ರಯುಕ್ತ ಮಡಿಕೇರಿ ವಿಧಾನಸಭಾ ಕ್ಷೇತ್ರ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅತ್ತೂರು ಬಳಿ ಕಾರ್ಯಕರ್ತರ ಸಭೆಯಲ್ಲಿ ಸಚಿವರು ಪಾಲ್ಗೊಂಡರು.
ಈ ಸಂದರ್ಭ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ರಮೇಶ್, ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಶಕ್ತಿ ಕೇಂದ್ರದ ಪ್ರಮುಖರಾದ ಪ್ರವೀಣ್, ಮಂಜುನಾಥ್, ಬೂತ್ ಪ್ರಭಾರಿ ಕೆ.ಜಿ. ಮನು, ಉಪಾಧ್ಯಕ್ಷ ವರದ ಮತ್ತಿತರರು ಇದ್ದರು.
ಸಚಿವರು ನಂತರ ಬೈಚನಹಳ್ಳಿ ಬಳಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ನಿಲಯದ ಸಿಬ್ಬಂದಿಗಳ ಜೊತೆ ಚರ್ಚೆ ನಡೆಸಿದರು.