ಹಾವೇರಿ, ಜ. ೯: ಹಾವೇರಿಯಲ್ಲಿ ಜರುಗಿದ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನಕ ಶರೀಫ ಸರ್ವಜ್ಞರ ಪ್ರಧಾನ ವೇದಿಕೆಯಲ್ಲಿ ನಡೆದ ಸಾಧಕರಿಗೆ ಸನ್ಮಾನದಲ್ಲಿ ೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೊಡಗಿನಲ್ಲಿ ಯಶಸ್ವಿಯಾಗಿ ನಡೆಸಿದ ಕೊಡಗು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ನಡೆದ ಬಹಿರಂಗ ಅಧಿವೇಶನದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರನ್ನು ಸನ್ಮಾನಿಸಲಾಯಿತು.