ಕುಶಾಲನಗರ, ಜ. ೮: ಬಿಜೆಪಿ ಪಕ್ಷದ ಬೂತ್ ವಿಜಯ ಅಭಿಯಾನ ಸೋಮವಾರಪೇಟೆ ಮಂಡಲ ಗುಡ್ಡೆಹೊಸೂರು ಶಕ್ತಿ ಕೇಂದ್ರದ ಅತ್ತೂರಿನ ಬೂತ್ ಸಂಖ್ಯೆ ೧೭೮ರಲ್ಲಿ ನಡೆಯಿತು.
ಬೂತ್ ಅಧ್ಯಕ್ಷ ಜಯಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಅಭಿಯಾನವನ್ನು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಕಾರ್ಯಕರ್ತರು ನಿರಂತರ ಶ್ರಮವಹಿಸಬೇಕು ಎಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಬೂತ್ ವಿಜಯ ಅಭಿಯಾನದ ಉದ್ದೇಶದ ಬಗ್ಗೆ ಮಾಹಿತಿ ಒದಗಿಸಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಪ್ರಾಸ್ತಾವಿಕ ನುಡಿಗಳಾಡಿದರು.
ವಿಧಾನ ಪರಿಷತ್ ಸದಸ್ಯ ಎಂ.ಪಿ ಸುಜಾ ಕುಶಾಲಪ್ಪ ಬಿಜೆಪಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿದರು. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿ.ಕೆ. ಲೋಕೇಶ್, ಕಾರ್ಯದರ್ಶಿ ಪುಷ್ಪಾ ನಾಗೇಶ್, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್, ಮಂಡಲ ಒಬಿಸಿ ಮೋರ್ಚಾ ಖಜಾಂಚಿ ಅಭಿಷೇಕ್, ಶಕ್ತಿ ಕೇಂದ್ರದ ಪ್ರಮುಖರಾದ ಪ್ರವೀಣ್ ಕುಶಾಲಪ್ಪ, ನಿತ್ಯಾನಂದ ಹಾಗೂ ಗುಡ್ಡೆಹೊಸೂರು ಪಂಚಾಯಿತಿ ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷೆ ಯಶೋಧ, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್ ಹಾಗೂ ಸದಸ್ಯರು ಮತ್ತು ಕಾರ್ಯಕರ್ತರು ಇದ್ದರು.