ಸೋಮವಾರಪೇಟೆ, ಜ. ೯ : ಕರ್ನಾಟಕ ಟ್ಯಾಕ್ಸಿ ಡ್ರೆöÊರ್ಸ್ ಅಸೋಸಿಯೇಷನ್ (ಕೆಟಿಡಿಓ) ಸಂಘದ ವತಿಯಿಂದ ತಾ. ೨೬ರಂದು ಅದ್ಧೂರಿ ಗಣರಾಜ್ಯೋತ್ಸವ ಮತ್ತು ರಾಜ್ಯಮಟ್ಟದ ಮುಕ್ತ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಬಿ.ವಿ. ರವಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಅಂದು ಬೆಳಿಗ್ಗೆ ಜಿಲ್ಲಾ ಸಮಿತಿಯ ಸಮಾವೇಶ ನಡೆಸಲಾಗುವುದು. ನಂತರ ಖಾಸಗಿ ಬಸ್ ನಿಲ್ದಾಣದಲ್ಲಿನ ಬೃಹತ್ ವೇದಿಕೆಯಲ್ಲಿ ಮಧ್ಯಾಹ್ನ ೨ಕ್ಕೆ ಪುರುಷೋತ್ತಮ್ ಮತ್ತು ತಂಡದದವರಿAದ ದೇಶ ಭಕ್ತಿ ಗೀತೆಗಾಯನ ನಡೆಯಲಿದೆ. ೧೨ ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಹಾಗೂ ೧೨ ವರ್ಷ ನಂತರದವರಿಗೆ ಮುಕ್ತ ನೃತ್ಯ ಸ್ಪರ್ಧೆ ನಡೆಯುವುದು ಎಂದರು.
ರಾಜ್ಯಮಟ್ಟದ ನೃತ್ಯ ಸ್ಪರ್ಧೆಯ ವಿಜೇತರಿಗೆ ಮೊದಲ ಬಹುಮಾನ ರೂ. ೨೫ ಸಾವಿರ, ದ್ವಿತೀಯ ಬಹುಮಾನ ರೂ. ೧೫ ಸಾವಿರ ಹಾಗೂ ತೃತೀಯ ಬಹುಮಾನ ರೂ. ೧೦ ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗು ವುದು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ತಂಡಗಳಿಗೂ ಸಮಾಧಾನಕರ ಬಹುಮಾನ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. ಸಂಜೆ ೬ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ರಾಮನಗರ ಜಿಲ್ಲೆಯ ಗೆಜ್ಜೆಗಾಲುಕೊಪ್ಪದ ಮುರಾರಿ ಸ್ವಾಮಿಗಳ ಪುಣ್ಯ ಕ್ಷೇತ್ರದ ಪೀಠಾಧಿಪತಿ ಡಾ. ಕುಮಾರಸ್ವಾಮಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ. ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ಕಾಂಗ್ರೆಸ್ ಮುಖಂಡರಾದ ಬಿ.ಎ. ಜೀವಿಜಯ, ಡಾ. ಮಂಥರ್ ಗೌಡ, ಹರಪಳ್ಳಿ ರವೀಂದ್ರ, ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ, ಉದ್ಯಮಿಗಳಾದ ಅರುಣ್ ಕಾಳಪ್ಪ, ಸುಲೈಮಾನ್, ಪವನ್ ದೇವಯ್ಯ, ಕೆಟಿಡಿಓ ಸಮಿತಿಯ ರಾಜ್ಯಾಧ್ಯಕ್ಷ ರಮೇಶ್ ಕುಂದಾಪುರ, ಗೌರವಾಧ್ಯಕ್ಷ ಇಕ್ಬಾಲ್, ಯುವ ಘಟಕದ ಅಧ್ಯಕ್ಷ ಅವಿನಾಶ್ ಕೇಸರಿ, ಆರ್ಟಿಓ ಎಂ. ಶಿವಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಗುವುದು. ಸಮಾಜ ಸೇವಕರಿಗೆ ಸನ್ಮಾನ ಕಾರ್ಯಕ್ರಮ ನಂತರ ಸಂಘದ ಸಾಧನೆ ಕುರಿತು ಸಾಕ್ಷö್ಯ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ೯೪೪೯೨೭೩೦೧೦ ಅಥವಾ ೯೯೪೫೨೮೫೩೬೪ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದ್ದಾರೆ. ಗೋಷ್ಠಿಯಲ್ಲಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ಮಂಜುನಾಥ್, ತಾಲೂಕು ಸಮಿತಿ ಕಾರ್ಯದರ್ಶಿ ಎಸ್.ಆರ್. ಪ್ರಸನ್ನ, ಸಂಘಟನಾ ಕಾರ್ಯದರ್ಶಿ ಪಿ.ವಿ. ಕೃಷ್ಣ (ಮಣಿ) ಖಜಾಂಚಿ ಕೆ.ಎನ್. ದೀಪಕ್ ಇದ್ದರು.