ಗೋಣಿಕೊಪ್ಪಲು, ಜ. ೮: ಗೋಣಿಕೊಪ್ಪ ವಲಯ ಯುವ ಕಾಂಗ್ರೆಸ್‌ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೂರೇರ ಬೋಪಣ್ಣ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೆಪಿಸಿಸಿ ವಕ್ತಾರ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಆದೇಶ ಪ್ರತಿ ವಿತರಿಸಿದರು. ಈ ವೇಳೆ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ಮಿದೇರಿರ ನವೀನ್, ಯುವ ಕಾಂಗ್ರೆಸ್‌ನ ಅಧ್ಯಕ್ಷ ನಾಮೇರ ಅಂಕಿತ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಕೋಳೆರ ಭಾರತಿ, ಹಿರಿಯ ಮುಖಂಡ ಮೂಕಳೇರ ಕುಶಾಲಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.