ಸುಂಟಿಕೊಪ್ಪ, ಜ. ೧೦: ಕೊಡಗರ ಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಮಾಹಿತಿ ಹಾಗೂ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಬಿ.ಎಸ್. ಶಿಲಾ ರೈ ಮಾತನಾಡಿ, ಗರ್ಭಿಣಿಯರು ಟಿ.ಡಿ. ಚುಚ್ಚುಮದ್ದು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ಕಾರ್ಯಕರ್ತೆ, ಕಿರಿಯ ಮಹಿಳಾ ಆರೋಗ್ಯ ಕಾರ್ಯಕರ್ತೆ ಕೆ.ಸಿ.ಲತಾ, ಆಶಾ, ಕಾರ್ಯಕರ್ತೆ ಜ್ಯೋತಿ ಭಾಸ್ಕರ ದಿನದ ಮಹತ್ವದ ಕುರಿತು ಮಾತನಾಡಿದರು.
ಕೊಡಗರಹಳ್ಳಿ ಗ್ರಾ.ಪಂ. ಸದಸ್ಯ ಚೆನ್ನಬಸವಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರೋಗ್ಯವಂತ ಮಕ್ಕಳನ್ನು ಗುರುತಿಸಿ ಬಹುಮಾನ ವನ್ನು ವಿತರಿಸಲಾಯಿತು. ಸಮುದಾಯ ಆರೋಗ್ಯ ಅಧಿಕಾರಿ ಟೆಸ್ನಿ ಥೋಮಸ್, ಆಶಾ ಕಾರ್ಯಕರ್ತೆಯರಾದ ಕವಿತಾ, ಗೀತ, ಅಂಗನವಾಡಿ ಸಹಾಯಕಿ ಸಂಧ್ಯಾ, ಕೊಡಗರಹಳ್ಳಿ ಸರಕಾರಿ ಮಾದರಿ ಪ್ರಾಥಮಿ ಶಾಲೆಯ ಮುಖ್ಯೋಪಾಧ್ಯಾಯಿನಿ ಭಾಗೀರಥಿ ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಮಹದೇವಮ್ಮ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಎಸ್.ಎನ್. ಸಾವಿತ್ರಿ ನಿರೂಪಿಸಿ, ವಂದಿಸಿದರು.