ಸುAಟಿಕೊಪ್ಪ, ಜ.೯ : ಕಾಜೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಜ್ಯೋತಿ ಪ್ರಯುಕ್ತ ತಾ. ೧೪ರಂದು ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.
ತಾ.೧೪ ರಂದು ಬೆಳಿಗ್ಗೆ ೯.೩೦ ಗಂಟೆಗೆ ಗಣಪತಿ ಹೋಮ ಮತ್ತು ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಸಂಜೆ ೬ ಗಂಟೆಯಿAದ ದೇವಾಲಯದಲ್ಲಿ ದೀಪ ಬೆಳಗಿಸಿ ನಂತರ ಭಜನಾ ಕಾರ್ಯಕ್ರಮ ರಾತ್ರಿ ೮ ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಭಕ್ತಾದಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿದೆ ಎಂದು ಅಯ್ಯಪ್ಪ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ತಿಳಿಸಿದೆ.